ಸಿಎಂ ಕಾರ್ಯಕ್ರಮಕ್ಕೆ ಬಸ್ ನಿಯೋಜನೆ, ಪರದಾಡಿದ ಜನ: ಆರೋ‍ಪ
ಬೀದರ್:ಮಾ.8: ಸರ್ಕಾರಿ ಬಸ್‌ಗಳ ಕೊರತೆಯಿಂದಾಗಿ ಗುರುವಾರ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ, ಶಾಲೆ, ಕಾಲೇಜುಗಳಿಗೆ ತೆರಳಲು ತೊಂದರೆ ಉಂಟಾಗಿದೆ’ ಜನರು ಬಸ್ ಗಳಿಲ್ಲದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ ಬಿರಾದಾರ ದೂರಿದ್ದಾರೆ.
ಬಸವಕಲ್ಯಾಣದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಭಿನಂದನಾ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಕರೆತರಲು ಜಿಲ್ಲೆಯ ಎಲ್ಲ ತಾಲ್ಲೂಕು ಬಸ್ ಘಟಕಗಳಿಂದ ಬಸ್‌ಗಳನ್ನು ಬಳಸಿಕೊಂಡಿದ್ದರಿಂದ ಪಿಯುಸಿ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳು ತುಂಬಾ ಅನಾನುಕೂಲ ಅನುಭವಿಸಿದರು’ ಎಂದು ದೂರಿದ್ದಾರೆ.
ಜಿಲ್ಲೆಯ ಪಿಯುಸಿ ಫಲಿತಾಂಶದಲ್ಲಿ ವ್ಯತ್ಯಾಸ ಆದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೇ ನೇರ ಹೊಣೆಗಾರರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.