ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ ಕಾರ್ಯಗಳನ್ನುಮನೆಮನೆಗೆ ಮುಟ್ಟಿಸಬೇಕು:ಚಂದ್ರಶೇಖರ್ ಪಾಟೀಲ
ಬೀದರ,ಮಾ.08: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನಪರ ಕಾರ್ಯಗಳನ್ನು ಮನೆಮನೆಗೆ ಮುಟ್ಟಿಸುವ ಕಾರ್ಯವನ್ನು ಬೀದರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ಯುವ ಮೊರ್ಚಾದ ಕಾರ್ಯಕರ್ತರು ಮಾಡಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗೆ ಗೆಲ್ಲಿಸಲು ಶ್ರಮಿಸಬೇಕೆಂದು ಬೀದರ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಯುವ ಮೊರ್ಚಾ ಘಟಕದ ಜಿಲ್ಲಾಧ್ಯಕ್ಷರಾದ ಚಂದ್ರಶೇಖರ್ ಬಿ. ಪಾಟೀಲ ಅವರು ಇಂದು ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಯುವ ಮೊರ್ಚಾದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಯುವ ಮೋರ್ಚಾದ ಕಾರ್ಯಕರ್ತರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರದಿಂದ ಜಾರಿಯಾದ ಅನೇಕ ಜನಪರ ಯೋಜನೆಗಳ ಫಲಾನುಭವಿಗಳ ಮನೆ ಮನೆಗೆ ತೆರಳಿ ಮತ್ತೊಮ್ಮೆ ನರೇಂದ್ರ ಮೋದಿಯವರಿ ದೇಶದ ಪ್ರಧಾನಮಂತ್ರಿ ಮಾಡಲು ಬೀದರ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿಗೆ ಅತಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಸೋಮನಾಥ ಪಾಟೀಲ ಹುಡಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿರಣ್ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜನಾರ್ಧನ ರೆಡ್ಡಿ, ಸಚ್ಚಿದಾನಂದ್ ಚಿದ್ರಿ, ದಿನೇಶ್ ಮೂಲಗೆ ಹಾಗೂ ಜಿಲ್ಲಾ ಮೋರ್ಚಾದ ಪದಾಧಿಕಾರಿಗಳು, ಮಂಡಲ ಅಧ್ಯಕ್ಷರು ಉಪಸ್ಥಿತರಿದ್ದರು.