ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರ
ಆನೇಕಲ್, ಮಾ. ೮- ನುಡಿದಂತೆ ನಡೆದ ಸರ್ಕಾರ ಕಾಂಗ್ರೆಸ್ ಸರ್ಕಾರವಾಗಿದ್ದು, ಚುನಾವಣೆ ಸಂಧರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ ಐದು ಗ್ಯಾರಂಟಿಗಳನ್ನು ನಮ್ಮ ಸರ್ಕಾರ ನೀಡುವ ಮೂಲಕ ನುಡಿದಂತೆ ನಡೆದಿದ್ದೇವೆ ಎಂದು ಸಂಸದ ಡಿ.ಕೆ. ಸುರೇಶ್ ತಿಳಿಸಿದರು.
ಅವರು ಚಂದಾಪುರದಲ್ಲಿ ಆಯೋಜಿಸಿದ್ದ ಜನ ಸಂಪರ್ಕ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದು ೧೦ ವರ್ಷ ಆಗಿದೆ ಜನರ ಕಲ್ಯಾಣಕ್ಕಾಗಿ ಒಂದು ಹೊಸ ಯೋಜನೆ ಮಾಡಿಲ್ಲ, ಧರ್ಮದ ಹೆಸರನ್ನು ಹೇಳಿಕೊಂಡು ಜನರನ್ನು ಯಾಮಾರಿಸಿ ಅದಿಕಾರವನ್ನು ಪಡೆಯುತ್ತಿದ್ದಾರೆ, ದೇಶದ ಜನತೆ ಪ್ರಜ್ಞಾವಂತರಾಗಿದ್ದಾರೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಆನೇಕಲ್ ತಾಲ್ಲೂಕಿನ ಪ್ರತಿ ಗ್ರಾಮಕ್ಕೂ ಕಾವೇರಿ ನೀರು ಪೂರೈಸಲಾಗುವುದು ಇದರಲ್ಲಿ ಯಾವುದೇ ಅನುಮಾನ ಬೇಡ ಹಾಗೆಯೇ ಅತ್ತಿಬೆಲೆ, ಸರ್ಜಾಪುರ ಹಾಗೂ ಆನೇಕಲ್ ವರೆಗೂ ಮೆಟ್ರೋ ರೈಲು ವಿಸ್ತರಣೆ ಮಾಡಲಾಗುವುದು ಎಂದು ಹೇಳಿದರು.,
ಶಾಸಕ ಬಿ.ಶಿವಣ್ಣ ಮಾತನಾಡಿ ಸಾರ್ವಜನಿಕರ ಅನುಕೂಲಕ್ಕಾಗಿ ಚಂದಾಪುರದಲ್ಲಿ ಇಂದಿರಾ ಕ್ಯಾಂಟೀನ್ ಮಾಡುವ ಉದ್ದೇಶದಿಂದ ಇಂದು ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ದೇವೆ, ಆನೇಕಲ್ ಕ್ಷೇತ್ರದ ಸರ್ವಾಂಗೀಣ ಅಭಿವೃದಿಮ್ಮೀಗಾಗಲೇ ಹೆಚ್ಚು ಒತ್ತು ನೀಡಲಾಗುತ್ತಿದೆ. ಜನ ಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳನ್ನು ತಿಳಿಸಿದ್ದು ಮುಂದಿನ ದಿನಗಳಲ್ಲಿ ಹಂತ-ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ಭರವಸೆ ವ್ಯಕ್ತ ಪಡಿಸಿದರು.
ಜನ ಸಂಪರ್ಕ ಸಭೆಯಲ್ಲಿ ತಹಶೀಲ್ದಾರ್ ಶಶಿದರ್ ಮಾಡ್ಯಾಳ್, ಯೋಜನಾ ನಿರ್ದೇಶಕರಾದ ರಂಗಸ್ವಾಮಿ,ಚಂದಾಪುರ ಪುರಸಭೆ ಮುಖ್ಯಾದಿಕಾರಿ ಶ್ರೀನಿವಾಸ್, ಆರ್.ಓ.ಸುದಾಕರ್, ಇಂಜಿಯರ್ ಆದರ್ಶ್, ಸೂರ್ಯಸಿಟಿ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಸಂಜೀವ್ ಮಹಾಜನ್ ಮತ್ತು ಪುರಸಭೆ ಸದಸ್ಯರು ಹಾಗೂ ಇಲಾಖೆ ಅದಿಕಾರಿಗಳು, ಪುರಸಭೆ ಅದಿಕಾರಿಗಳು ಮತ್ತು ಸಾರ್ವಜನಿಕರು ಬಾಗವಹಿಸಿದ್ದರು.