ಬಾಲ್ಯದಿಂದಲೇ ಲೋಕಜ್ಞಾನ ತುಂಬಿಸಿ: ಸಿಪಿಐ ಸುಮಾರಾಣಿ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ:ಮಾ.08-ಮಕ್ಕಳಲ್ಲಿ ಬಾಲ್ಯದಿಂದಲೇ ಲೋಕಜ್ಞಾನ ಮತ್ತು ವ್ಯವಹಾರ ಜಾಣ್ಮೆಯನ್ನು ತುಂಬಿಸಿ ವಿದ್ಯಾರ್ಥಿಗಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ಮಕ್ಕಳ ಸಂತೆ ಮತ್ತು ವಿಜ್ಞಾನ ಮಾದರಿ ವಸ್ತು ಪ್ರದರ್ಶನಗಳು ವರದಾನವಾಗಿದೆ ಎಂದು ಪಟ್ಟಣ ಪೆÇೀಲಿಸ್ ಠಾಣೆಯ ಸಿಪಿಐ ಬಿ.ಸುಮಾರಾಣಿ ಹೇಳಿದರು.
ಪಟ್ಟಣದ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿಮಕ್ಕಳ ಸಂತೆಯಲ್ಲಿ ಸುತ್ತುಹಾಕಿ ಹಣ್ಣು ತರಕಾರಿಗಳನ್ನು ಖರೀದಿಸಿದ ಸುಮಾರಾಣಿ ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ತುಂಬುವ ಮಕ್ಕಳ ಸಂತೆಯು ನಿಜವಾಗಿಯೂ ಮಕ್ಕಳ ಸಮಗ್ರವಾದ ವ್ಯಕ್ತಿತ್ವದ ವಿಕಸನಕ್ಕೆ ವರದಾನವಾಗಿದೆ. ಈ ದಿಕ್ಕಿನಲ್ಲಿ ವಿದ್ಯಾರ್ಥಿಗಳ ಪೆÇೀಷಕರು ನೀಡಿರುವ ಪೆÇ್ರೀತ್ಸಾಹ ಹಾಗೂ ಮಾರ್ಗದರ್ಶನವು ಮಕ್ಕಳಲ್ಲಿ ಹೊಸ ಹುರುಪನ್ನು ಮೂಡಿಸಿದೆ ಎಂದರು.
ಪುರಸಭಾ ಸದಸ್ಯ ಹಾಗೂ ಮಾಜಿ ಅಧ್ಯಕ್ಷ ಕೆ.ಬಿ.ಮಹೇಶ್ ಬಿಜಿಎಸ್ ಸ್ಕೂಲ್ ವಿದ್ಯಾರ್ಥಿಗಳು ತಯಾರಿಸಿ ಪ್ರದರ್ಶಿಸಿದ ವಿಜ್ಞಾನ ಮಾದರಿಗಳ ವಸ್ತುಪ್ರದರ್ಶನ ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ವಿಜ್ಞಾನ, ತಂತ್ರಜ್ಞಾನ ಹಾಗೂ ವಿಜ್ಞಾನದ ಆವಿಷ್ಕಾರದ ಬಗ್ಗೆ ಅರಿವು ಮತ್ತು ಆಸಕ್ತಿ ಬೆಳೆಸಿಕೊಳ್ಳಬೇಕು. ವಿವಿಧ ಮಾದರಿಗಳಿಂದಾಗುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಿಕೊಂಡು ಹೊಸ ಹೊಸ ಸಂಶೋಧನೆಗಳನ್ನು ಮಾಡುವತ್ತ ಚಿಂತಿಸಬೇಕು. ಹೊಸ ವಸ್ತುಗಳನ್ನು ಮಕ್ಕಳು ಆವಿಷ್ಕಾರ ಮಾಡುವುದರಿಂದ ಮಕ್ಕಳಲ್ಲಿ ಸೃಜನಶೀಲತೆಯು ಹೆಚ್ಚಾಗಿ ಏನನ್ನಾದರೂ ಸಾಧಿಸಬೇಕು ಎಂಬ ಛಲವು ಮೂಡುತ್ತದೆ. ಇಂದು ಬಿಜಿಎಸ್ ಶಿಕ್ಷಣ ಸಂಸ್ಥೆಯಲ್ಲಿ ಆಯೋಜಿಸಿರುವ ಮಕ್ಕಳ ಸಂತೆ ಹಾಗೂ ವಿಜ್ಞಾನ ವಸ್ತುಪ್ರದರ್ಶನವು ಮಕ್ಕಳ ಜ್ಞಾನವರ್ಧನೆ ಹಾಗೂ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗವಾಗಿದೆ ಎಂದು ಹೇಳಿದರು.
ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಗಳು ಹಾಗೂ ಹೇಮಗಿರಿ ಶಾಖಾ ಮಠದ ಗೌರವ ಕಾರ್ಯದರ್ಶಿಗಳಾದ ಡಾ.ಜೆ.ಎನ್.ರಾಮಕೃಷ್ಣೇಗೌಡ ಕಾರ್ಯಕ್ರದಮ ನೇತೃತ್ವ ವಹಿಸಿ ಮಕ್ಕಳಲ್ಲಿ ಹೊಸ ಹೊಸ ಚಿಂತನೆಗಳನ್ನು ಮೂಡಿಸಿ ವೈಜ್ಞಾನಿಕ ಮನೋಭಾವನೆ ಮೂಡಿಸಿ ಸಮಾಜಮುಖಿಯಾಗಿ ಹೆಜ್ಜೆ ಹಾಕಲು ಇಂದಿನ ಎರಡೂ ಕಾರ್ಯಕ್ರಮಗಳು ಉಪಯುಕ್ತವಾಗಿವೆ ಎಂದು ಹೇಳಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಾದ ಬಿ.ನಂಜಪ್ಪ, ಬ್ಯಾಲದಕೆರೆ ಪಾಪೇಗೌಡ, ವಕೀಲ ಎಸ್.ಸಿ.ವಿಜಯಕುಮಾರ್, ಕಸಾಪ ಮಾಜಿ ಅಧ್ಯಕ್ಷರಾದ ಎಂ.ಕೆ.ಹರಿಚರಣತಿಲಕ್, ಬಳ್ಳೇಕೆರೆ ಮಂಜುನಾಥ್, ಕೆ.ಆರ್.ನೀಲಕಂಠ, ಟಿ.ವೈ.ಆನಂದ, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಪ್ರಾಂಶುಪಾಲರಾದ ಪ್ರಸನ್ನ, ಪ್ರಸಾದೇಗೌಡ, ಉಪನ್ಯಾಸಕ ರಾಮಚಂದ್ರ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.