ಮಹಿಳಾ ದಿನಾಚರಣೆ ಆಚರಣೆ
ಕಲಬುರಗಿ :ಮಾ.8:ನಗರದ ಕೆಎಚ್‍ಬಿ ಗ್ರೀನ್ ಪಾರ್ಕ್ ಬಡಾವಣೆಯಲ್ಲಿ ಅದ್ದೂರಿಯಾಗಿ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಮಹಿಳೆಯರು ಬಣ್ಣ ಬಣ್ಣದ ಸೀರೆಗಳನ್ನು ಧರಿಸಿಕೊಂಡು ಅದ್ದೂರಿಯಾಗಿ ಬಡಾವಣೆಯಲ್ಲಿ ಮೆರವಣಿಗೆ ಮೂಲಕ ಘೋಷಣೆಗಳೊಂದಿಗೆ ಮಹಿಳಾ ದಿನಾಚರಣೆಯ ಜಾಗೃತಿ ಮೂಡಿಸಲಾಯಿತು. ಮಹಿಳೆ ಅಬಲೆಯಲ್ಲ, ಸಬಲೇ ನಾರಿ ಶಕ್ತಿ ಜಗತ್ತಿಗೆ ಪರಿಚಯಿಸಿದ ಅದ್ಭುತ ರಾಷ್ಟ್ರ ಭಾರತ. ಪ್ರತಿಯೊಂದು ಕ್ಷೇತ್ರದಲ್ಲಿ ತನ್ನದೇ ಆದ ಸಾಧನೆ ಮಾಡುವ ಮೂಲಕ ಕುಟುಂಬ ನಿರ್ವಹಣೆಯೊಂದಿಗೆ ಸಮಾಜ ಕಟ್ಟುವ ಕಾರ್ಯ ಮಾಡುತ್ತಿದ್ದಾರೆ ಎಂದು ಮೆರವಣಿಗೆ ಚಾಲನೆ ನೀಡಿದ ಕೆಎಚ್‍ಬಿ ಗ್ರೀನ್ ಪಾರ್ಕ್ ಕ್ಷೇಮಭಿವೃದ್ಧಿ ಸಂಘದ ಅಧ್ಯಕ್ಷರಾದ ಸಂಜೀವಕುಮಾರ ಶೆಟ್ಟಿ ಹೇಳಿದರು. ಕಾರ್ಯಕ್ರಮದಲ್ಲಿ ಬಡಾವಣೆಯ ಹಲವಾರು ಮಹಿಳೆಯರು ಭಾಗವಹಿಸಿದ್ದರು.