ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಮಾ.7:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಇದೇ ಮಾರ್ಚ್ 8 ರಿಂದ 10 ರವರೆಗೆ ಕಲಬುರಗಿಯಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಾಸ್ತವ್ಯ ಮಾಡುವರು.
ನಂತರ ಮಾರ್ಚ್ 11ರಂದು ಸೋಮವಾರ ಮಧ್ಯಾಹ್ನ 2.55 ಗಂಟೆಗೆ ಕಲಬುರಗಿಯಿಂದ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.