ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರ ಪ್ರವಾಸ
ಕಲಬುರಗಿ:ಮಾ.7:ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ ಧರ್ಮಸಿಂಗ್ ಅವರು ಮಾರ್ಚ್ 8 ರಂದು ಶುಕ್ರವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಕಲಬುರಗಿ ಕೆ.ಕೆ.ಆರ್.ಡಿ.ಬಿ. ಕಚೇರಿಯ ಅಭಿವೃದ್ಧಿ ಭವನದ ಸಭಾಂಗಣದಲ್ಲಿ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ “ಅಕ್ಷರ ಆವಿಷ್ಕಾರ” ಪ್ರಗತಿ ವರದಿ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸುವರು.