ಹೆಣ್ಣುಮಕ್ಕಳು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಬೇಕು:ಸಜ್ಜನ್
ಗುರುಮಠಕಲ್:ಮಾ.7: ಗುರುಮಠಕಲ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ತಾಲೂಕ ಆಡಳಿತ ತಾಲೂಕು ಪಂಚಾಯಿತಿ ಗುರುಮಠಕಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ, ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ. ಭೇಟಿ ಬಚಾವೋ ಭೇಟಿ ಪಡಾವೋ ಕಾರ್ಯಕ್ರಮದಡಿ. ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಮತ್ತು ನಾಯಕತ್ವದ ಕುರಿತು ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಗಚ್ಚಿನ ಮನಿ ಮೋನಪ್ಪ ಅವರು ಮಾತನಾಡಿ, ಭೇಟಿ ಬಚಾವೋ ಭೇಟಿ ಪಡಾವೋ ಯೋಜನೆಯು, ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆದು ಉನ್ನತ ಹುದ್ದೆಗಳನ್ನು ಪಡೆದು ಸ್ವಹಲಂಬಿ ಜೀವನವನ್ನು ನಡೆಸುವಂತೆ ಮಾಡಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಗೊಳಿಸುವುದಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದಂತಹ ಡಾಕ್ಟರ್. ಬಿ. ಆರ್. ಕೇತನಕರ್ ಸಹಾಯಕ ಪ್ರಾಧ್ಯಾಪಕರು ಸರಕಾರಿ ಪದವಿ ಮಹಾವಿದ್ಯಾಲಯ ಯಾದಗಿರಿಯವರು ಮಾತನಾಡಿ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ನಾಯಕತ್ವದ ಕುರಿತು ಮಾಹಿತಿ ನೀಡಿದರು. ಕರ್ನಾಟಕದಲ್ಲಿ ಹಲವಾರು ಮಹಿಳೆಯರು ಸಣ್ಣಪುಟ್ಟ ಉದ್ಯೋಗಗಳನ್ನು ಪ್ರಾರಂಭಿಸಿ ದೊಡ್ಡಮಟ್ಟದ ಉದ್ಯಮಿಗಳಾಗಿ ಹೊರ ಹೊಮ್ಮಿದ ಬಗ್ಗೆ ಉದಾಹರಣೆಗಳೊಂದಿಗೆ ತಿಳಿಸಿದರು. ಹೆಣ್ಣು ಮಕ್ಕಳು ಮನೆಯಿಂದ ಹೊರ ಬಂದು ಧೈರ್ಯದಿಂದ ಸ್ವಾಹಲಂಬನೆಯ ಜೀವನ ನಡೆಸುವಂತಾಗಬೇಕು ಎಂದು ತಿಳಿಸಿದರು. ಕಾಲೇಜಿನ ಬೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾಕ್ಟರ್ ಜೆ.ವಿ. ಪುರುμÉೂೀತ್ತಮ ರವರು ಮಾತನಾಡಿ ವಿದ್ಯಾರ್ಥಿನಿಯರು ಉನ್ನತ ಮಟ್ಟದ ಶಿಕ್ಷಣವನ್ನು ಪಡೆದು. ಉನ್ನತ ಹುದ್ದೆಗಳನ್ನು ಪಡೆದು ಒಳ್ಳೆಯ ಜೀವನ ನಡೆಸಬೇಕು ಶಿಕ್ಷಣವನ್ನು ಅರ್ಧಕ್ಕೆ ನಿಲ್ಲಿಸದೆ ಕೊಟ್ಟ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಶ್ರೀಮತಿ ಶರಣಮ್ಮ ಸಜ್ಜನ್ ಹಿರಿಯ ಮೇಲ್ವಿಚಾರಕಿ ಶಿಶು ಅಭಿವೃದ್ಧಿ ಯೋಜನೆ ಗುರುಮಠಕಲ ಇವರು ಮಾತನಾಡಿ ಹೆಣ್ಣು ಮಕ್ಕಳು ತಮ್ಮ ಹಕ್ಕುಗಳ ಕುರಿತು ಜಾಗೃತ ರಾಗಬೇಕು ಮತ್ತು ಹೆಣ್ಣು ಮಕ್ಕಳ ಶಿಕ್ಷಣ ಹೆಣ್ಣು ಬ್ರೂಣ ಹತ್ಯೆ ಯನ್ನು ತಡೆಯುವುದು ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಅನುμÁ್ಠನ ಮಾಡಲಾಗುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನೆಯ ಪ್ರಥಮ ದರ್ಜೆ ಸಹಾಯಕರಾದ ಸತೀಶ್ ಜಗನ್ನಾಥ್. ಕಚೇರಿಯ ಸಿಬ್ಬಂದಿಗಳಾದ ಮಹಾಂತೇಶ್, ಕಮಲೇಶ್, ರಾಮಮೂರ್ತಿ, ಭೀಮಪ್ಪ ಭಾಗವಹಿಸಿದ್ದರು.