ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆ

ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೭: ರಾಷ್ಟ್ರೀಯ ಕಾರ್ಯಕ್ರಮದಡಿ ಡಯಟ್‌ನಲ್ಲಿ  ನಡೆದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಜೂನಿಯರ್ ವಿಭಾಗದಿಂದ ಹಿರಿಯೂರು ತಾಲೂಕಿನ ಹೂವಿನ ಹೊಳೆ ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿ ರಶ್ಮಿತ .ಎಸ್ ಪ್ರಥಮ ಸ್ಥಾನ, ಸೀನಿಯರ್ ವಿಭಾಗದಿಂದ ಹೊಸದುರ್ಗ ಪಟ್ಟಣದ ಸರ್ಕಾರಿ ಪ.ಪೂ ಕಾಲೇಜು (ಪ್ರೌಢಶಾಲೆ ವಿಭಾಗ) ವಿದ್ಯಾರ್ಥಿ ಎಂ.ಸಾಗರ್ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಪ್ರಾಚಾರ್ಯ ಎಂ.ನಾಸಿರುದ್ದೀನ್ ಟ್ರೋಫಿ, ಪದಕ ಮತ್ತು ಪ್ರಮಾಣ ಪತ್ರ ವಿತರಿಸಿದರು. ನೋಡಲ್ ಅಧಿಕಾರಿ ಎಸ್.ಬಸವರಾಜು, ಕ್ವಿಜ್ ಮಾಸ್ಟರ್ ಕೆ.ಆರ್.ಲೋಕೇಶ್, ಹಿರಿಯ ಉಪನ್ಯಾಸಕ ತಿಪ್ಪೇಸ್ವಾಮಿ, ಉಪನ್ಯಾಸಕರಾದ ಆರ್.ನಾಗರಾಜು, ಎನ್.ಮಂಜುನಾಥ್, ತಾಂತ್ರಿಕ ಸಹಾಯಕ ಆರ್.ಲಿಂಗರಾಜು, ಶಿಕ್ಷಕ ವೀರೇಶ್ ಮತ್ತು ಮತ್ತಿತರರಿದ್ದರು.