ದೇವಾಲಯಗಳನ್ನು ಉಳಿಸಿ ಬೆಳೆಸುವುದು ನಮ್ಮ ಜವಬ್ದಾರಿ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮಾ.07: ತಾಲ್ಲೂಕಿನ ಬೂಕನಕೆರೆ ಹೋಬಳಿಯ ರಂಗನಾಥಪುರ ಗ್ರಾಮದ ಬಳಿಯಿರುವ ಶ್ರೀ ಮುನೇಶ್ವರ ದೇವಾಲಯದಲ್ಲಿ ನಡೆದ 7ನೇ ವರ್ಷದ ಪೂಜಾ ಕಾರ್ಯಕ್ರಮ ಹಾಗೂ ಅನ್ನಧಾನ ಕಾರ್ಯಕ್ರಮದಲ್ಲಿ ಸಮಾಜ ಕಾಂಗ್ರೆಸ್ ಮುಖಂಡರು ಹಾಗೂ ಮಿತ್ರ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ವಿಜಯ್ ರಾಮೇಗೌಡ ಅವರು ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ವಿಜಯ್ ರಾಮೇಗೌಡ ಅವರು ಮನುಷ್ಯನಿಗೆ ಬೇಕಾದ ಶಾಂತಿ-ನೆಮ್ಮದಿಯನ್ನು ಯಾವುದೇ ಮಾರುಕಟ್ಟೆಯಲ್ಲಿ ಕೊಂಡು ಕೊಳ್ಳಲು ಸಾಧ್ಯವಿಲ್ಲ ಕೇವಲ ದೇವರ ಮೊರೆ ಹೋಗುವುದರಿಂದ, ಬಡವರಿಗೆ ನಿರ್ಗತಿಕರಿಗೆ ಧಾನ ಧರ್ಮಗಳನ್ನು ಮಾಡುವುದರಿಂದ ಪಡೆಯಬಹುದಾಗಿದೆ.
ಶಾಂತಿ ನೆಮ್ಮದಿಯ ತಾಣವಾಗಿರುವ ದೇವಾಲಯಗಳನ್ನು ಉಳಿಸಿ ಬೆಳೆಸುವುದು ನಮ್ಮ ಜವಾಬ್ದಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬರು ಧಾನ ಧರ್ಮದ ಗುಣಗಳನ್ನು ಬೆಳೆಸಿಕೊಳ್ಳಬೇಕು. ಈ ಮೂಲಕ ಸಂಸ್ಕೃತಿ ಪರಂಪರೆಯನ್ನು ಉಳಿಸಲು ಕೈಜೋಡಿಸಬೇಕು ಎಂದು ವಿಜಯ್ ರಾಮೇಗೌಡ ರವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಹಾಜರಿದ್ದ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಬಿ.ಜವರಾಯಿಗೌಡ ಅವರು ಮಾತನಾಡಿ ನಮ್ಮ ತಾಲ್ಲೂಕಿನಲ್ಲಿ ದೇವಾಲಯಗಳ ಜೀರ್ಣೋದ್ದಾರಕ್ಕೆ ದೇಣಿಗೆ ನೀಡುವ ಪರಂಪರೆಯನ್ನು ಹುಟ್ಟು ಹಾಕಿ, ದೇವಾಲಯಗಳ ಅಭಿವೃದ್ದಿಗೆ ಕೈಜೋಡಿಸಿದ ವಿಜಯ್ ರಾಮೇಗೌಡ ಅವರ ಸೇವೆ ಶ್ಲಾಘನೀಯವಾದುದು. ಜೊತೆಗೆ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಕ್ರೀಡಾ ಚಟುವಟಿಕೆಗೆ, ಪೌರಾಣಿಕ ನಾಟಕಗಳಿಗೆ ತಮ್ಮ ಕೈಲಾದ ನೆರವು ನೀಡುವ ಮೂಲಕ ತಾಲ್ಲೂಕಿನ ಜನತೆಯ ಮನೆ ಮಗನಂತಿರುವ ವಿಜಯ್ ರಾಮೇಗೌಡರವರು ನಮ್ಮ ಬೂಕನಕೆರೆ ಗ್ರಾಮದವರು ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ ಇವರಿಗೆ ಮುಂದಿನ ದಿನಗಳಲ್ಲಿ ಆ ದೇವರು ತಾಲ್ಲೂಕಿನಲ್ಲಿ ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸುವ ಅವಕಾಶ ಕಲ್ಪಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀ ಮುನೇಶ್ವರ ದೇವಾಲಯದ ಅರ್ಚಕರಾದ ನಾಗರಾಜಸ್ವಾಮಿ, ಜೆ.ದಯಾನಂದ್, ವಿಜಯ್ ರಾಮೇಗೌಡರ ಆಪ್ತ ಸಹಾಯಕ ಬಸವರಾಜು ಸೇರಿದಂತೆ ಹಲವು ಗಣ್ಯರು ಸಾರ್ವಜನಿಕರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತಾಧಿಗಳಿಗೆ ದೇವಾಲಯ ಸಮಿತಿಯ ವತಿಯಿಂದ ಅನ್ನ ಸಂತರ್ಪಣಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತು.