ಮಾ.7 ರಂದು ಹಾಲು ಒಕ್ಕೂಟದಿಂದ ಎಮ್ಮೆ ಹಾಲು ಬಿಡುಗಡೆ
ಕಲಬುರಗಿ:ಮಾ.06:ಕಲಬುರಗಿ-ಬೀದರ ಹಾಗೂ ಯಾದಗಿರ ಹಾಲು ಒಕ್ಕೂಟದಿಂದ ಮಾರುಕಟ್ಟೆಗೆ ಬಿಡುಗಡೆ ಮಾಡಲಿರುವ ಎಮ್ಮೆ ಹಾಲನ್ನು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮಾರ್ಚ್ 7 ರಂದು ಗುರುವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಶ್ರೀ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಬಿಡುಗಡೆ ಮಾಡುವರು.
ಈ ಸಂದರ್ಭದಲ್ಲಿ ಕಲಬುರಗಿ-ಬೀದರ ಹಾಗೂ ಯಾದಗಿರ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ನಿರ್ದೇಶಕರು ಉಪಸ್ಥಿತರಿರುವರು.