ಮತದಾರರ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಅಭಿಯಾನಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಚಾಲನೆ
ಕಲಬುರಗಿ: ಮಾ. 06: ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ ಮತ್ತು ಸ್ವೀಪ್ ಸಮಿತಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಲಬುರಗಿ ವತಿಯಿಂದ ಜಿಲ್ಲೆ ಜಿಮ್ಸ್ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಬೈಕ್ ರ್ಯಾಲಿ ಅಭಿಯಾನ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತರಾದ ಪಾಟೀಲ ಭುವನೇಶ ದೇವಿದಾಸ, ಜಿಲ್ಲಾ ಪಂಚಾಯತ ಕಾರ್ಯಾದರ್ಶಿ ಮಲ್ಲಿಕಾರ್ಜುನ ಚಳಗೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನವೀನ ಯು. ಅಂಗವೀಕಲ ಕಲ್ಯಾಣಾಧಿಕಾರಿ ಸಾಧಿಕ ಹುಸೇನ್ ಖಾನ, ಜಿ.ಪಂ. ಅಧೀಕ್ಷಕ ಜನನಮಲ್ಲಿಕಾರ್ಜುನ ಸೇರಿದಂತೆ ಅಧಿಕಾರಿಗಳು ವೈದ್ಯಾಧಿಕಾರಿಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.