ಮಾ. 7 ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದಶರಣಬಸವೇಶ್ವರ ಕೆರೆ ಪುನರ್ ನವೀಕರಣ ಕಾಮಗಾರಿಗಳ ಉದ್ಘಾಟನೆ
ಕಲಬುರಗಿ:ಮಾ.5:ಕಲಬುರಗಿ ಹೃದಯ ಭಾಗದಲ್ಲಿರುವ ಶ್ರೀ ಶರಣಬಸವೇಶ್ವರ ಕೆರೆ ನಿರ್ವಹಣಾ ಪ್ರಾಧಿಕಾರದ “ಅಪ್ಪನ ಕೆರೆ” ಎಂದೇ ಪ್ರಸಿದ್ಧಿ ಹೊಂದಿರುವ ಶರಣಬಸವೇಶ್ವರ ಕೆರೆ ಆವರಣದಲ್ಲಿ ಕೈಗೊಂಡ ಪುನರ್ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಇದೇ ಮಾರ್ಚ್ 7 ರಂದು ಬೆಳಿಗ್ಗೆ 10 ಗಂಟೆಗೆ ಜರುಗಲಿದೆ ಎಂದು ಕಲಬುರಗಿ ಶ್ರೀ ಶರಣಬಸವೇಶ್ವರ ಕೆರೆ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಕೃಷ್ಣ ಬಾಜಪೇಯಿ ಅವರು ತಿಳಿಸಿದ್ದಾರೆ.