ಸಚಿವ ಸಂಪುಟ ಸಭೆ ಹಿನ್ನೆಲೆ: ಮಿನಿ ವಿಧಾನಸೌಧದ 200 ಮೀಟರ್ ಪ್ರದೇಶದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
ಕಲಬುರಗಿ:ಸೆ.16:ಕಲಬುರಗಿಯ ಮಿನಿ ವಿಧಾನಸೌಧದ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಇದೇ ಸೆಪ್ಟೆಂಬರ್ 17 ರಂದು ಮುಖ್ಯಮಂತ್ರಿಗಳು 19ನೇ ಸಚಿವ ಸಂಪುಟದ ಸಭೆ ನಡೆಯಲಿದ್ದು, ಈ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಲ್ಲಿ ಕಲಬುರಗಿ ಮಿನಿ ವಿಧಾನಸೌಧದ ಜಿಲ್ಲಾಧಿಕಾರಿಗಳ ಕಚೇರಿಯ ಸುತ್ತಮುತ್ತಲೂ (ಪ್ರದೇಶದಲ್ಲಿ) 200 ಮೀಟರ ಪ್ರದೇಶ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 17 ರಂದು ಮಂಗಳವಾರ ಬೆಳಿಗ್ಗೆ 10 ರಿಂದ ರಾತ್ರಿ 12 ಗಂಟೆಯವರೆಗೆ ಬಿ.ಎನ್.ಎಸ್.ಎಸ್ ಕಾಯ್ದೆ ಪ್ರಕ್ರಿಯಾ ಸಂಹಿತೆ ಕಾಯ್ದೆ 1973 ರ ಕಲಂ 163 ರನ್ವಯ ನಿμÉೀಧಾಜ್ಞೆಯನ್ನು ಜಾರಿಗೊಳಿಸಿ ಕಲಬುರಗಿ ನಗರ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಹಾಗೂ ಉಪ ಪೊಲೀಸ್ ಆಯುಕ್ತರು (ಕಾ&ಸು) ರಾದ ಕನಿಕಾ ಸಿಕ್ರಿವಾಲ ಅವರು ಸೋಮವಾರ ಆದೇಶ ಹೊರಡಿಸಿದ್ದಾರೆ.