2.44 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು
ಕಲಬುರಗಿ,ಸೆ.16-ಮನೆಯ ಬೆಡ್‍ರೂಮ್‍ನ ಸೆಲ್ಪ್‍ನಲ್ಲಿಟ್ಟಿದ್ದ 2.44 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಗರದ ಚಿಂಚೋಳಿ ಲೇಔಟ್‍ನ ಶಿವಲಿಂಗ ನಗರದಲ್ಲಿ ನಡೆದಿದೆ.
ಮಲ್ಲಿಕಾರ್ಜುನ ಕಲಶೆಟ್ಟಿ ಎಂಬುವವರ ಮನೆಯಲ್ಲಿಯೇ ಕಳ್ಳತನಾಗಿದ್ದು, ಅವರ ಈ ಸಂಬಂಧ ಆರ್.ಜಿ.ನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ತನಿಖೆ ನಡೆದಿದೆ.