ಬೀದರನಲ್ಲಿ ನೂತನ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನ
ಬೀದರ್: ಅ.4:ಬೀದರನಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನೂತನ ವಿಶಾಲ ಮಾರುಕಟ್ಟೆ ನಿರ್ಮಾಣಕ್ಕೆ ಪ್ರಯತ್ನಿಸಲಾಗುವುದು ಎಂದು ಸಂಸದ ಸಾಗರ್ ಖಂಡ್ರೆ ಭರವಸೆ ನೀಡಿದರು.
ಇಲ್ಲಿಯ ಗಾಂಧಿಗಂಜನ ಬಸವೇಶ್ವರ ದೇವಸ್ಥಾನದಲ್ಲಿ ದಿ ಗ್ರೇನ್ ಆಯಿಂಡ್ ಸೀಡ್ಸ್ ಮಚರ್ಂಟ್ಸ್ ಅಸೋಸಿಯೇಷನ್ ವತಿಯಿಂದ ಈಚೆಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಹೊಸ ಮಾರುಕಟ್ಟೆ ನಿರ್ಮಾಣ ವ್ಯಾಪಾರಿಗಳ ಹಾಗೂ ರೈತರ ಬೇಡಿಕೆಯಾಗಿದೆ. ಇದನ್ನು ಈಡೇರಿಸುವ ದಿಸೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರೊಂದಿಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.
ಕಿರಿಯ ವಯಸ್ಸಿನಲ್ಲೇ ನನ್ನನ್ನು ಸಂಸತ್ತಿಗೆ ಆರಿಸಿ ಕಳುಹಿಸಿದ್ದಕ್ಕೆ ಮತದಾರರಿಗೆ ಕೃತಜ್ಞನಾಗಿರುವೆ. ಹಿರಿಯರ ಮಾರ್ಗದರ್ಶನದೊಂದಿಗೆ ಜಿಲ್ಲೆಯ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳನ್ನು ಈಡೇರಿಸಲು ಶ್ರಮಿಸುವೆ ಎಂದು ಹೇಳಿದರು.
ಇದಕ್ಕೂ ಮುನ್ನ ಮಾತನಾಡಿದ ದಿ ಗ್ರೇನ್ ಆಯಿಂಡ್ ಸೀಡ್ಸ್ ಮಚರ್ಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಬಸವರಾಜ ಧನ್ನೂರ ಅವರು, ಹೊಸ ಮಾದರಿ ಮಾರುಕಟ್ಟೆ ನಿರ್ಮಾಣದ ಅಗತ್ಯತೆಯನ್ನು ಸಂಸದರಿಗೆ ಮನವರಿಕೆ ಮಾಡಿದರು.
ಬೀದರನ ಎಪಿಎಂಸಿ ಮಾರುಕಟ್ಟೆ ಪ್ರಮುಖ ವಾಣಿಜ್ಯ ಕೇಂದ್ರವಾಗಿದ್ದು, ಜಿಲ್ಲೆಯ ಆರ್ಥಿಕತೆಯ ಬೆನ್ನೆಲುಬಾಗಿದೆ ಎಂದು ತಿಳಿಸಿದರು.
60 ವರ್ಷಗಳ ಹಿಂದೆ ಆಗಿನ ಅವಶ್ಯಕತೆಗೆ ಅನುಗುಣವಾಗಿ ಮಾರುಕಟ್ಟೆ ನಿರ್ಮಿಸಲಾಗಿತ್ತು. ಇದೀಗ ತೀರಾ ಚಿಕ್ಕದಾಗಿದೆ ಎಂದು ಹೇಳಿದರು.
ಸದ್ಯ ಮಾರುಕಟ್ಟೆಗೆ ಕೃಷಿ ಉತ್ಪನ್ನಗಳ ಆವಕ ಹೆಚ್ಚಾಗಿದೆ. ವ್ಯಾಪಾರಿಗಳ ಸಂಖ್ಯೆಯೂ ವೃದ್ಧಿಸಿದೆ. ಎಲ್ಲರ ಅನುಕೂಲಕ್ಕಾಗಿ ವಿಶಾಲವಾದ ಮಾರುಕಟ್ಟೆ ನಿರ್ಮಾಣ ತುರ್ತಾಗಿ ಆಗಬೇಕಿದೆ. ಅಸೋಸಿಯೇಷನ್ ಈ ನಿಟ್ಟಿನಲ್ಲಿ ದಶಕದಿಂದ ಬೇಡಿಕೆ ಮಂಡಿಸುತ್ತಲೇ ಬಂದಿದೆ ಎಂದು ತಿಳಿಸಿದರು.
ಅಸೋಸಿಯೇಷನ್ ಪದಾಧಿಕಾರಿಗಳೊಂದಿಗೆ ಈ ಕುರಿತ ಮನವಿ ಪತ್ರವನ್ನೂ ಖಂಡ್ರೆ ಅವರಿಗೆ ಸಲ್ಲಿಸಿದರು. ಮುಖ್ಯ ಅತಿಥಿಯಾಗಿದ್ದ ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಮಾತನಾಡಿದರು.
ಎಪಿಎಂಸಿ ಕಾರ್ಯದರ್ಶಿ ಪರಮೇಶ್ವರಿ ಫುಲೇಕರ್, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಶಿವಾನಂದ ಕುಂಬಾರ, ಅಸೋಸಿಯೇಷನ್ ಉಪಾಧ್ಯಕ್ಷ ನಾಗಶೆಟ್ಟೆಪ್ಪ ದಾಡಗಿ, ಕಾರ್ಯದರ್ಶಿ ಭಗವಂತ ಔದಮಪುರ, ದಾಲ್ ಮಿಲ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ ರೇಜಂತಲ್, ಟ್ರಾನ್ಸ್‍ಪೆÇೀರ್ಟ್ ಅಸೋಸಿಯೇಷನ್ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ, ಕಾರ್ಯದರ್ಶಿ ಶಿವರುದ್ರಪ್ಪ ಗಿರಿ, ರೈಸ್ ಮಚರ್ಂಟ್ಸ್ ಅಸೋಸಿಯೇಷನ್ ಅಧ್ಯಕ್ಷ ಶಂಕರ ಗುನ್ನಳ್ಳಿ, ಕಾರ್ಯದರ್ಶಿ ರಾಜು ಬಗದಲ್, ಫರ್ಟಿಲೈಸರ್ಸ್ ಅಸೋಸಿಯೇಷನ್ ಉಪಾಧ್ಯಕ್ಷ ಕಂಟೆಪ್ಪ ಪಾಟೀಲ ಕನ್ನಳ್ಳಿ, ದಿ ಗ್ರೇನ್ ಆಯಿಂಡ್ ಸೀಡ್ಸ್ ಮಚರ್ಂಟ್ಸ್ ಅಸೋಸಿಯೇಷನ್ ಕಾರ್ಯಕಾರಿಣಿ ಸದಸ್ಯರಾದ ರಾಜಕುಮಾರ ಬಿರಾದಾರ ಗುನ್ನಳ್ಳಿ, ಸೋಮನಾಥ ಗಂಗಶೆಟ್ಟಿ, ನಾಗಶೆಟ್ಟೆಪ್ಪ ಕಾರಾಮುಂಗಿ, ಬಂಡೆಪ್ಪ, ಬಾಲಾಜಿ, ಗೋವಿಂದರಾವ್ ನೀಲಮನಳ್ಳಿ, ಪ್ರಭುಶೆಟ್ಟಿ ಮುದ್ದಣ್ಣ, ವಿಶ್ವನಾಥ ಕಾಜಿ, ಹನುಮಾನದಾಸ್ ಅಗರವಾಲ್, ಪ್ರಮುಖರಾದ ಶಾಮರಾವ್ ಸುಲಗುಂಟೆ, ಶ್ಯಾಮಸುಂದರ ಬೋರಾ, ಅಣ್ಣಾರಾವ್ ಮೊಗಶೆಟ್ಟಿ, ನಾಗರಾಜ ನಂದಗಾಂವ್, ದಿಗಂಬರ್ ಪೆÇೀಲಾ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಗಾಂಧಿಗಂಜ್ ವ್ಯಾಪಾರಿಗಳು, ಮುನೀಮರು, ರೈತರು ಹಾಗೂ ಕೃಷಿ ಕೂಲಿ ಕಾರ್ಮಿಕರು ಪಾಲ್ಗೊಂಡಿದ್ದರು.
ಕಲಾವಿದ ಶಿವಕುಮಾರ ಪಾಂಚಾಳ ಸಂಗೀತ ನಡೆಸಿಕೊಟ್ಟರು. ದೀಪಕ್ ಥಮಕೆ ನಿರೂಪಿಸಿದರು. ಪ್ರಕಾಶ ಗೌಡಪ್ಪನೋರ್ ವಂದಿಸಿದರು.