ಕುಡಿವ ನೀರಿಗೆ ಆದ್ಯತೆ ನೀಡಿ ಶಾಸಕ ವಜ್ಜಲ್ ಅಧಿಕಾರಿಗಳಿಗೆ ಖಡಕ್ ಸೂಚನೆ
ಸಂಜೆವಾಣಿ ವಾರ್ತೆ
ಲಿಂಗಸೂಗೂರು.ಮಾ.೦೫- ತಾಲೂಕಿನಲ್ಲಿ ಬರುವ ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗದೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾರ್ಯನಿರ್ವಹಣಾ ಮಾಡಲು ಮುಂದಾಗಬೇಕು ಹಾಗೂ ಜನರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ತಾಲೂಕಿನಲ್ಲಿ ಮುಂದಿನ ಮೂರು ತಿಂಗಳ ಕಾಲ ಸರಿಯಾದ ರೀತಿಯಲ್ಲಿ ಸೌಲಭ್ಯ ಒದಗಿಸಲು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೋಮವಾರ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಕಛೇರಿಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ವಹಿಸಿ ಸ್ಥಳದಲ್ಲಿ ಇದ್ದ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಖಡಕ್ ಸೂಚನೆ ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ್ ರವರು ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ತಾಲೂಕು ಮಟ್ಟದ ಅನುಷ್ಟಾನದ ಅಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ತುರ್ತು ಸಭೆ ಅಧ್ಯಕ್ಷತೆ ವಹಿಸಿ ಶಾಸಕ ಮಾನಪ್ಪ ಡಿ ವಜ್ಜಲ್ ಮಾತನಾಡಿದರು.
ಈಗಾಗಲೇ ಎಲ್ಲಾಕಡೆ ಕುಡಿಯುವ ನೀರಿನ ಪೂರೈಕೆ ಮಾಡಲು ನಾವೆಲ್ಲರೂ ಶ್ರಮಿಸಬೇಕು ಹಾಗೂ ಸಮಸ್ಯೆಗಳ ಇರುವ ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೆಲಸ ಮಾಡಲು ಶುರು ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕರು
ಸೂಚಿಸಿದರು.
ಇದೆ ಸಂದರ್ಭದಲ್ಲಿ ಟಾಸ್ಕ್ ಫೋರ್ಸ್ ಸಮಿತಿಯಲ್ಲಿ ಭಾಗವಹಿಸಿ ಮಾತನಾಡಿದ ತಹಶೀಲ್ದಾರ್ ಡಾ ಮಲ್ಲಪ್ಪ ಯರಗೊಳ ಖಾಸಗಿ ಬೋರವೆಲ್‌ಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ನೀರು ಸರಬರಾಜು ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಯಾದವ್ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಂಗಪ್ಪ, ಪುರಸಭೆ ಅಧಿಕಾರಿಗಳಾದ ಜಗನ್ನಾಥ ಜೋಷಿ, ಹನುಮಂತ ನಾಯಕ ಸೇರಿದಂತೆ ಇತರರು ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.