ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಸಚಿವ ಈಶ್ವರ ಖಂಡ್ರೆ
ಸಂಜೆವಾಣಿ ವಾರ್ತೆ
ಚಿಟಗುಪ್ಪ,ಮಾ.5-ಪಟ್ಟಣದ ರಘೋಜಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ನೇತೃತ್ವದಲ್ಲಿ ಸೋಮುವಾರ ತಾಲೂಕಿನ ಸಾರ್ವಜನಿಕರ ಕುಂದು ಕೊರೆತೆಗಳ ಜನಸ್ಪಂದನ ಸಭೆ ಹಾಗು ರಾಜ್ಯ ಸರ್ಕಾರದ ಐದು ಗ್ಯಾಂರಂಟಿ ಸ್ಕೀಮ್ ಗಳ ಸಮಾವೇಶ ಜರುಗಿತು.
ಕಾರ್ಯಕ್ರಮವನ್ನು ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಉದ್ಘಾಟನೆ ಮಾಡಿ ಮಾತನಾಡಿ, ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ವಿವರಿಸಿದರು. ನಂತರ ಸಾರ್ವಜನಿಕರಿಂದ ಅರ್ಜಿ ಸ್ವೀಕರಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ತದನಂತರ ಮಾಧ್ಯಮ ಪ್ರತಿನಿಧಿಗಲ ಜೊತೆಗೆ ಮಾತನಾಡಿ, ಇಂದು ಸಮಾವೇಶದಲ್ಲಿ ಗ್ಯಾರಂಟಿ ಯೋಜನೆ ಫಲಾನುಭವಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿ ಕಾರ್ಯಕ್ರಮ ಯಶಸ್ವಿಗೊಳಿಸಿದ್ದಾರೆ. ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆಗಳು ನಿರಂತರವಾಗಿ ನಡೆಯಲಿವೆ. ಯಾವುದೇ ಉಹಾಪೋಹ ಗಳಿಗೆ ಜನರು ಕಿವಿ ಕೊಡಬಾರು ನಾವು ಕೊಟ್ಟ ಮಾತು ತಪ್ಪಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೌರಾಡಳಿತ ಸಚಿವ ರಹೀಮ್ ಖಾನ್, ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶೇಖರ ಪಾಟೀಲ್, ಜಿಲ್ಲಾಧಿಕಾರಿ ಡಾ.ಗೋವಿಂದ ರೆಡ್ಡಿ, ಸಹಾಯಕ ಆಯುಕ್ತರಾದ ಪ್ರಕಾಶ ಕುದರೆ, ಎಸ್ಪಿ ಚನ್ನಬಸವ ಲಂಗೋಟಿ, ಸಿಇಓ ಗಿರೀಶ ಬದೋಲೆ, ತಹಸೀಲ್ದಾರ್ ರವೀಂದ್ರ ದಾಮ, ಇಓ ಅಕ್ರಮ ಪಾಶ,ಮುಖ್ಯಾಧಿಕಾರಿ ಹುಸಾಮೋದ್ದಿನ್ ಬಾಬಾ, ಡಿವೈಎಸ್‍ಪಿ ಜೆ.ಎಸ್. ನ್ಯಾಮೇಗೌಡ, ಸಿಪಿಐ ಶ್ರೀನಿವಾಸ ಅಲ್ಲಾಪುರೆ, ಪಿಎಸ್‍ಐ ಬಸವರಾಜ್ ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗು ಮಹಿಳೆಯರು, ಯುವಕರು ಉಪಸ್ಥಿತರಿದ್ದರು.