ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಜನರು ತಕ್ಕ ಪಾಠ ಕಲಿಸಲಿದ್ದಾರೆ: ರಾಜು ಆಲಗೂರ
ಸಂಜೆವಾಣಿ ವಾರ್ತೆ,
ವಿಜಯಪುರ,ಮಾ.5:ಬರುವ ಲೋಕಸಭೆ ಚುನಾವಣೆಯಲ್ಲಿ ಜನ, ಸಂವಿಧಾನ ವಿರೋಧಿ ಬಿಜೆಪಿ ಸರಕಾರವನ್ನು ಸೋಲಿಸಿ, ಕಾಂಗ್ರೆಸ್ ಪಕ್ಷ ಬೆಂಬಲಿಸಲು ದೇಶದ ಜನ ನಿರ್ಧರಿಸಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಾಜು ಆಲಗೂರ ಹೇಳಿದರು.
ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳ ಮೂಲಕ ಅವರ ಸವಾರ್ಂಗೀಣ ಅಭಿವೃದ್ಧಿ ಮಾಡುವುದಾಗಿ ಘೋಷಿಸಿದ್ದೇವು. ಅದರಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ಆಡಳಿತವನ್ನು ಜನ ಮೆಚ್ಚಿದ್ದಾರೆ. ಕರ್ನಾಟಕದ ಕಾಂಗ್ರೆಸ್ ಸರಕಾರದ ಉತ್ತಮ ಆಡಳಿತವನ್ನು ಇಡೀ ದೇಶದ ಜನರು ನೋಡುತ್ತಿದ್ದಾರೆ ಎಂದು ಹೇಳಿದರು.
ಚುನಾವಣೆಯಲ್ಲಿ ನೀಡಿದ 5 ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ಈಗಾಗಲೇ ಈಡೇರಿಸಿದೆ. ಬಿಜೆಪಿಯವರೂ ಭರವಸೆ ನೀಡಿದ್ದರು. 2 ಸಾವಿರ ಕೋಟಿ, ರೈತರ ಆದಾಯ ದ್ವಿಗುಣ ಹಾಗೂ ಸ್ವಿಸ್ ಬ್ಯಾಂಕ್ ನಲ್ಲಿ ಹಣ ತರುವುದಾಗಿ ಭರವಸೆ ನೀಡಿದ್ದರು
ಆದರೆ ಇವ್ಯಾವ ಭರವಸೆ ಈಡೇರಸದೇ ದೇಶದ ಜನರ ದಿಕ್ಕು ತಪ್ಪಿಸುವ ಕಾರ್ಯ ಮಾಡಿದ್ದಾರೆ. ಧರ್ಮಗಳ ಮಧ್ಯೆ ಜಗಳ ಹಚ್ಚಿ, ಜನರನ್ನು ಬೇರೆಡ ಗಮನ ಸೆಳೆಯುತ್ತಿದ್ದಾರೆ ಎಂದರು
ಬಿಜೆಪಿ ದುರಾಡಳಿತದ ವಿರುದ್ಧ ಜನ ಬೇಸತ್ತು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕಪಾಠ ಕಲಿಸಲು ಸಜ್ಜಾಗಿದ್ದಾರೆ ಎಂದರು.
ಪಕ್ಷಾತೀತ ಹಾಗೂ ಜಾತ್ಯತೀತವಾಗಿ
ನಮ್ಮ ಸರಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ನಮ್ಮ ಜಿಲ್ಲೆಯಲ್ಲಿ 4 ಲಕ್ಷಕ್ಕೂ ಹೆಚ್ವು ಜನರು ಗೃಹ ಜ್ಯೋತಿ ಲಾಭ ಪಡೆದುಕೊಂಡಿದ್ದಾರೆ.
ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಬಸ್ ಪ್ರಯಾಣ ಸೌಲಭ್ಯ ನೀಡಿದೆ.
ಅನ್ನ ಭಾಗ್ಯ ಯೋಜನೆ ಅಡಿ ಉಚಿತ ಅಕ್ಕಿ ನೀಡಲು ಕೇಂದ್ರ ಸರಕಾರ ಅಡ್ಡಿಪಡಿಸಿತು. ಈ ಅನ್ನಭಾಗ್ಯ ಯೋಜನೆಯಡಿ ಬಡವರ ಅನ್ನಕ್ಕೂ ಬಿಜೆಪಿಯವರು ವಿರೋಧ ಮಾಡಿದ್ದು, ರಾಜ್ಯದ ಜನತೆ ಮರೆತಿಲ್ಲ. ಈ ಭಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ಇಷ್ಟೆಲ್ಲ ಯೋಜನೆ ಜಾರಿಯಾಗಿದ್ದರೂ
ಬಿಜೆಪಿಯವರು ನಮ್ಮ ಕಾಂಗ್ರೆಸ್ ವಿರುದ್ಧ ಮತ್ತೆ ವೃಥಾ
ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಮೇಶ್ವರ ಕೆಫೆನಲ್ಲಿ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ ರಾಜಕೀಯ ಮಾಡಬಾರದು. ನಮ್ಮ ಕಾಂಗ್ರೆಸ್ ಪಕ್ಷ ಅಂಥ ದೇಶ ವಿರೋಧಿ ಚಟುವಟಿಕೆಗಳಿಗೆ ಇಂಬು ನೀಡುವುದಿಲ್ಲ ಎಂದರು.
ಯುಪಿಎ ಸರಕಾರ ನೀಡಿದ ಯೋಜನೆಗಳನ್ನು ಮೋದಿಯವರು ಮುಂದುವರಿಸಿದ್ದಾರೆ. ಹೊರತು ಹೊಸ ಜನಪರ ಯೋಜನೆ ಅನುಷ್ಠಾನ ಮಾಡಿಲ್ಲ ಎಂದು ಟೀಕಿಸಿದರು.
ಈ ಬಾರಿ ವಿಜಯಪುರ ಲೋಕಸಭೆ ಚುನಾವಣೆಯಲ್ಲಿ ಅಷ್ಟೇ ಅಲ್ಲ. ಇಡೀ ದೇಶದಲ್ಲಿಯೇ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಗ್ಯಾಸ್ ಬೆಲೆ 3 ಪಟ್ಟು ಹೆಚ್ಚಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಟೀಕಿಸಿದರು.
ಈ ದೇಶದಲ್ಲಿ ಬಿಜೆಪಿಯನ್ನು ಸೋಲಿಸಬೇಕು. ದೇಶದ ಜನ ಈ ಪಕ್ಷ ತಿರಸ್ಕರಿಸಬೇಕೆಂದು ಅವರು ಮನವಿ ಮಾಡಿದರು.
ಪಕ್ಷದ ಮುಖಂಡರಾದ ಸುರೇಶ ಘೋಣಸಗಿ, ವೈಜನಾಥ ಕರ್ಪೂರಮಠ, ಡಾ. ಗಂಗಾಧರ ಸಂಬಣ್ಣಿ, ಸುಭಾಸ ಛಾಯಾಗೋಳ, ವಸಂತ ಹೊನಮೋಡೆ, ಅಡಿವೆಪ್ಪ ಸಾಲಗಲ್, ಸಾಹೇಬಗೌಡ ಪಾಟೀಲ, ಬಸವರಾಜ ಯಂಕಂಚಿ, ಟಪಾಲ್ ಎಂಜಿನೀಯರ್ ಮತ್ತಿತರರಿದ್ದರು.
ನಾನೂ ಒಬ್ಬ ಲೋಕಸಭೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ. ಎಸ್ಸಿ ರೈಟ್ ಗೆ ಟಿಕೆಟ್ ನೀಡಬೇಕು. ಯಾರಿಗಾದರೂ ಟಿಕೆಟ್ ಕೊಟ್ಟರೂ ನಾವು ಆ ಅಭ್ಯರ್ಥಿಯನ್ನು ಗೆಲ್ಲಿಸಲಿಕ್ಕೆ ಬದ್ಧ ಎಂದು ರಾಜು ಆಲಗೂರ ತಿಳಿಸಿದರು.
10 ಜನ ಆಕಾಂಕ್ಷಿಗಳು ಅರ್ಜಿ ಕೊಟ್ಟಿದ್ದಾರೆ. ಯಾರಿಗೆ ಟಿಕೆಟ್ ನೀಡಿದರೂ ನಾವು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ ಎಂದರು.