ರಾಜ್ಯದ ಸಾರಿಗೆ ಹಾಗೂ ಮುಜರಾಯಿ ಸಚಿವರ ಪ್ರವಾಸ
ಕಲಬುರಗಿ:ಮಾ.04:ರಾಜ್ಯದ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಾರ್ಚ್ 5 ರಂದು ಮಂಗಳವಾರ ಬೆಳಿಗ್ಗೆ 9.35 ಗಂಟೆಗೆ ಕಲಬುರಗಿಗೆ ಅಗಮಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನೂತನವಾಗಿ ಆಯ್ಕೆಯಾದ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣಾ ಸಮಾರಂಭ ಹಾಗೂ “ನಮ್ಮ ಕಲಬುರಗಿ ಸಾರಿಗೆ” ಆ್ಯಪ್‍ಗೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗವಹಿಸುವರು. ನಂತರ ಬೆಳಿಗ್ಗೆ 11.30 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ರಾಯಚೂರಿಗೆ ಪ್ರಯಾಣಿಸುವರು.