ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ಪ್ರವಾಸ
ಕಲಬುರಗಿ:ಮಾ.04:ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ ಅವರು ಬೆಂಗಳೂರಿನಿಂದ ವಿಮಾನದ ಮೂಲಕ ಮಾರ್ಚ್ 5 ರಂದು ಮಂಗಳವಾರ ಬೆಳಿಗ್ಗೆ 9.45 ಗಂಟೆಗೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾದ ನೂತನವಾಗಿ ಆಯ್ಕೆಯಾದ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ ಹಾಗೂ “ನಮ್ಮ ಕಲಬುರಗಿ ಸಾರಿಗೆ ಆ್ಯಪ್”ಗೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗವಹಿಸುವರು.
ಅಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಡಿಯುವ ನೀರು, ಬರ ನಿರ್ವಹಣೆ, ಜಾನುವಾರು ಮೇವು, ಉದ್ಯೋಗ ಹಾಗೂ ಕೃಷಿ ವಿಷಯಗಳ ಕುರಿತು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ನಡೆಸುವ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಮಧ್ಯಾಹ್ನ 1 ಗಂಟೆಗೆ ಕಲಬುರಗಿಯಿಂದ ರಸ್ತೆ ಮೂಲಕ ಹೈದ್ರಾಬಾದಿಗೆ ಪ್ರಯಾಣಿಸುವರು.