ಮಾ. 5 ರಂದು ಚಾಲಕ ಮತ್ತು ಚಾಲಕ-ಕಂ-ನಿವಾಹಕ ಸಿಬ್ಬಂದಿಗಳಿಗೆನೇಮಕಾತಿ ಆದೇಶ ಹಾಗೂ “ನಮ್ಮ ಕಲಬುರಗಿ ಸಾರಿಗೆ” ಆ್ಯಪ್‍ಕ್ಕೆ ಚಾಲನೆ
ಕಲಬುರಗಿ:ಮಾ.04:ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನೂತನವಾಗಿ ಆಯ್ಕೆಯಾದ ಚಾಲಕ ಮತ್ತು ಚಾಲಕ-ಕಂ-ನಿರ್ವಾಹಕ ಸಿಬ್ಬಂದಿಗಳಿಗೆ ನೇಮಕಾತಿ ಆದೇಶ ವಿತರಣೆ, ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯೊಂದಿಗೆ “ಆರೋಗ್ಯ ಸೇವೆ ಒಡಂಬಡಿಕೆ” ಪತ್ರ ಹಸ್ತಾಂತರ ಹಾಗೂ “ನಮ್ಮ ಕಲಬುರಗಿ ಸಾರಿಗೆ” ಆ್ಯಪ್‍ಗೆ ಚಾಲನೆ ನೀಡುವ ಸಮಾರಂಭವು ಮಾರ್ಚ್ 5 ರಂದು ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜರುಗಲಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ಹಾಗೂ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ ಬೀದರ ಸಂಸದರಾದ ಭಗವಂತ ಖೂಬಾ ಅವರು ಗೌರವ ಉಪಸ್ಥಿತಿ ವಹಿಸುವರು.
ರಾಜ್ಯದ ಸಾರಿಗೆ ಮತ್ತು ಮುಜರಾಯಿ ಸಚಿವರು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಆದೇಶ ವಿತರಿಸುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು “ನಮ್ಮ ಕಲಬುರಗಿ ಸಾರಿಗೆ” ಆ್ಯಪ್‍ಕ್ಕೆ ಚಾಲನೆ ನೀಡುವರು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ ಅವರು ಶ್ರೀ ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ “ಆರೋಗ್ಯ ಸೇವೆ ಒಡಂಬಡಿಕೆ ಪತ್ರ ಹಸ್ತಾಂತರ” ಮಾಡುವರು.
ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಆಳಂದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಸಲಹೆಗಾರರಾದ ಬಿ.ಆರ್. ಪಾಟೀಲ ಹಾಗೂ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರೇಷ್ಮೆ ಉದ್ಯಮಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕನೀಜ್ ಫಾತೀಮಾ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ ಜಿ. ಜಾಧವ, ಶಾಸಕರುಗಳಾದ ಎಂ.ವೈ. ಪಾಟೀಲ, ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ ಹಾಗೂ ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಡಾ. ಸಾಬಣ್ಣ ತಳವಾರ, ತಿಮ್ಮಣ್ಣಪ್ಪ ಕಮಕನೂರ ಹಾಗೂ ಮಹಾನಗರ ಪಾಲಿಕೆ ಮಹಾಪೌರ ವಿಶಾಲ ಎಸ್. ದರ್ಗಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸಾರಿಗೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ್, ಕೃಷಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು ಹಾಗೂ ಬೆಂಗಳೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಬೆಂಗಳೂರಿನ ನಗರ ಭೂ ಸಾರಿಗೆ ನಿರ್ದೇಶನಾಲಯದ ಆಯುಕ್ತ ದೀಪಾ ಚೋಳನ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಂ. ಸುಂದರೇಶ ಬಾಬು, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ, ಬೆಂಗಳೂರು ಬೆಂ.ಮ.ಸಾ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಆರ್., ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್., ಕಲಬುರಗಿ ನಗರ ಪೊಲೀಸ್ ಆಯುಕ್ತ ಚೇತನ್ ಆರ್., ಮಹಾನಗರ ಪಾಲಿಕೆ ಆಯುಕ್ತ ಪಾಟೀಲ ಭುವನೇಶ ದೇವಿದಾಸ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಎಂ.ಹಾಕೆ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.