ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ
ಕೊಲ್ಹಾರ:ಮಾ.4:ದೇಶಾದ್ಯಂತ ಮಾರ್ಚ್ 3 ರಿಂದ 6 ರ ವರೆಗೆ ನಡೆಯುವ ಸಾರ್ವತ್ರಿಕ ಪಲ್ಸ್ ಪೆÇೀಲಿಯೋ ಲಸಿಕಾ ಅಭಿಯಾನದ ಅಂಗವಾಗಿ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಶ್ರೀಮತಿ ಲಕ್ಷ್ಮೀ ತೆಲ್ಲೂರ ಮಾತನಾಡುತ್ತಾ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದ ನೇತೃತ್ವದಲ್ಲಿ ಒಟ್ಟು 13 ಲಸಿಕಾ ತಂಡಗಳನ್ನು ರಚನೆ ಮಾಡಲಾಗಿದ್ದು ಪ್ರತಿದಿನ ಅಂಗನವಾಡಿ ಕೇಂದ್ರಗಳಲ್ಲಿ ಹಾಗೂ ಪ್ರತಿ ಮನೆ ಮನೆಗೂ ತೆರಳಿ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೇ ಪೆÇೀಲಿಯೋ ಲಸಿಕೆ ಹಾಕಲಾಗುವುದು ಆರೋಗ್ಯ ಇಲಾಖೆಯ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಲಸಿಕೆ ಹಾಕಲು ಆಗಮಿಸಿದ ಸಂದರ್ಭದಲ್ಲಿ ಜನರು ಸಹಕಾರ ನೀಡಬೇಕು ಎಂದರು.
ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಪ್ರತಿದಿನ ಶೇ 85 ರಿಂದ 90 ರಷ್ಟು ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಆಯುಷ್ ವೈದ್ಯಾಧಿಕಾರಿ ಎಸ್.ಎಂ ಪಾಟೀಲ್ ಮಾತನಾಡುತ್ತಾ ಶಾಶ್ವತ ಅಂಗವೈಕಲ್ಯ ತಡೆಯುವ ಉದ್ದೇಶದಿಂದ 5 ವರ್ಷದ ಒಳಗಿನ ಮಕ್ಕಳಿಗೆ ಎರಡು ಹನಿ ಪೆÇೀಲಿಯೋ ಹಾಕಲಾಗುತ್ತದೆ ಲಸಿಕಾ ಕಾರ್ಯಕ್ರಮದಲ್ಲಿ ಪಾಲಕರು ಪ್ರತಿ ಮಗುವಿಗೂ ಲಸಿಕೆ ಹಾಕಿಸುವ ಮೂಲಕ ಅಭಿಯಾನವನ್ನು ಸಾಕಾರಗೊಳಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪ ಪಂ ಸದಸ್ಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹಾಗೂ ಇತರರು ಇದ್ದರು.