ಘನತ್ಯಾಜ್ಯ ಸಂಸ್ಕರಣ ಯಂತ್ರ, ತ್ಯಾಜ್ಯ ವಿಲೇವಾರಿ ವಾಹನಗಳ ಲೋಕಾರ್ಪಣೆ
ವಿಜಯಪುರ,ಮಾ.4:ವಿಜಯಪುರ ಮಹಾನಗರ ಪಾಲಿಕೆಯಿಂದ ಸ್ವಚ್ಛ ಭಾರತ ಮಿಷನ್ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಖರೀದಿಸಲಾಗಿರುವ 100 ಟಿಪಿಡಿ ಸಾಮಥ್ರ್ಯದ ತ್ಯಾಜ್ಯ ಸಂಸ್ಕರಣ ಯಂತ್ರಗಳಿಗೆ ಹಾಗೂ ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.
ಭಾನುವಾರ ನಗರದ ಇಂಡಿ ರಸ್ತೆಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಹಮ್ಮಿಕೊಂಡ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಸಚಿವರು ಮಹಾನಗರ ಪಾಲಿಕೆ ಘನತ್ಯಾಜ್ಯ ಘಟಕದಲ್ಲಿ ದೈನಂದಿನವಾಗಿ ಉತ್ಪತ್ತಿಯಾಗುವ ತ್ಯಾಜ್ಯದ ನಿರ್ವಹಣೆಗಾಗಿ 100 ಟಿಪಿಡಿ ಸಾಮಥ್ರ್ಯದ ತ್ಯಾಜ್ಯ ಸಂಸ್ಕರಣಾ ಯಂತ್ರ ಹಾಗೂ ಮನೆ ಮನೆ ತ್ಯಾಜ್ಯ ಸಂಗ್ರಹಣೆ ಮತ್ತು ಸಾಗಾಣಿಕೆಗಾಗಿ 15 ಹಾಪರ್ ಟಿಪ್ಪರ್ ವಾಹನಗಳನ್ನು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಮಹಾಪೌರರಾದ ಮಹೇಜಬಿನ್ ಹೊರ್ತಿ ಉಪಮಹಾಪೌರರಾದ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ ಸೇರಿದಂತೆ ಮಹಾನಗರ ಪಾಲಿಕೆ ವಿವಿಧ ಸದಸ್ಯರು ಉಪಸ್ಥಿತರಿದ್ದರು.