ಕೃಷ್ಣಾ ನದಿಗೆ ಹಾರಿ ಯುವತಿ ಆತ್ಮಹತ್ಯೆ
ವಿಜಯಪುರ, ಸೆ.16:ಕೃಷ್ಣಾ ನದಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಗಡಗಿ ಗ್ರಾಮದ ಬಳಿ ನಡೆದಿದೆ.
ಬಾಗಲಕೋಟೆ ಜಿಲ್ಲೆ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಯುವತಿ ಬಾಲವ್ವ ಕಮರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಕಳೆದ ಸಪ್ಟೆಂಬರ್ 14 ರಂದು ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದ ಬಳಿಯ ಸೇತುವೆ ಮೇಲಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು.
ಯುವತಿ ಶವ ಪತ್ತೆಗೆ ಎರಡು ದಿನಗಳಿಂದ ಅಗ್ನಿಶಾಮಕ ದಳ ಸಿಬ್ಬಂದಿ ಪ್ರಯತ್ನ ನಡೆಸಿದ್ದು, ಇನ್ನೂ ಯುವತಿ ಶವ ಪತ್ತೆಯಾಗಿಲ್ಲ.
ಮುದ್ದೇಬಿಹಾಳ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.