ಬಿಜೆಪಿ ರೈತ ಮೋರ್ಚಾದಜಿಲ್ಲಾಧ್ಯಕ್ಷರ ಪದಗ್ರಹಣ
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಮಾ.04: ನಗರದ  ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಿನ್ನೆ ಪಕ್ಷದ  ರೈತ ಮೋರ್ಚಾದ ಜಿಲ್ಲಾ  ಅಧ್ಯಕ್ಷ ಗಣಪಾಲ ಐನಾಥರೆಡ್ಡಿ ಪದಗ್ರಹಣ ಕಾರ್ಯಕ್ರಮ ಮತ್ತು ಪದಾಧಿಕಾರಿಗಳ ಪರಿಚಯ ಸಭೆ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು  ಪಕ್ಷದ ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ ಮೋಕಾ ವಹಿಸಿದ್ದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ  ಗಾಳಿ ಶಂಕರಪ್ಪ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿ.ಎಸ್.ಶಂಕರ,  ಶರಣಗೌಡ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.