ಎಲೆಬೇತೂರು : ಪಲ್ಸ್ ಪೋಲಿಯೋ ಹನಿ ಕಾರ್ಯಕ್ರಮ

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೪; ತಾಲೂಕಿನ ಎಲೆ ಬೇತೂರು ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರದಲ್ಲಿ  ಪಲ್ಸ್ ಪೋಲಿಯೋ ಹನಿ ಕಾರ್ಯಕ್ರಮ ನಡೆಯಿತು. ಬೇತೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕಲ್ಪನಹಳ್ಳಿ ರೇವಣಸಿದ್ದಪ್ಪ ಮಗುವಿಗೆ ಪೋಲಿಯೋ ಹನಿ ಹಾಕುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ಆಶಾ ಭಾನುಪ್ರಕಾಶ್ ಮಾತನಾಡಿ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಿ ದೈಹಿಕ ನೂನ್ಯತೆ ತೊಂದರೆಯನ್ನು ತಪ್ಪಿಸಬೇಕೆಂದು ಈ ಸಂದರ್ಭದಲ್ಲಿ ತಿಳಿಸಿ ನಂತರ ಪ್ರತಿ ಮನೆಗೆ ಭೇಟಿ ನೀಡಿ ಲಸಿಕೆಯನ್ನು ಹಾಕಲಾಗುವುದು ಮನೆಯ ಬಾಗಿಲಿಗೆ ಕಾರ್ಯಕರ್ತರು ಬಂದಾಗ ಸಹಕರಿಸಬೇಕು ಮತ್ತು ಹೆಣ್ಣು ಗಂಡು ಭೇದವಿಲ್ಲದೆ ಎಲ್ಲ ಮಕ್ಕಳಿಗೆ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ಎಂ.ಎಸ್ .ಮಂಜುನಾಥ್, ಚೇತನ್ ಕುಮಾರ್ ಅಂಚಿನಮನಿ ಗ್ರಾಮದ ಮುಖಂಡರಾದ ಮಠದ  ಬಸವರಾಜಯ್ಯ, ಎಂಪಿ ಮಂಜುನಾಥ್, ತಾಲೂಕು ಕಸಾಪ ನಿರ್ದೇಶಕ ಷಡಕ್ಷರಪ್ಪ ಎಂ ಬೇತೂರ್,  ಹನುಮಂತಪ್ಪ, ಬೇತೂರು ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ಗುಣಶೀಲ ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿ ಶ್ರೀಮತಿ ಶಬೀನ ಬಾನು ಆಶಾ ಕಾರ್ಯಕರ್ತೆಯರು ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು