ಸರ್ಕಾರದ ಯೋಜನೆಗಳು ನಿಮ್ಮ ಮನೆ ಬಾಗಿಲಿಗೆ ಜನತಾ ದರ್ಶನ ಉದ್ದೇಶ: ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ.

ಸಂಜೆವಾಣಿವಾರ್ತೆ
ಹರಪನಹಳ್ಳಿ.ಮಾ.4: ತಾಲೂಕಿನ 168 ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳ ಸ್ಥಾಪನೆಗೆ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಸಚಿವರ ಕೋಟಾದಲ್ಲಿ 6 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ ಹೇಳಿದರು.ತಾಲೂಕಿನ ತೆಲಿಗಿ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ತೆಲಿಗಿ ಹೋಬಳಿ ಮಟ್ಟದ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ಒಂದು ಶಾಲೆಗೆ 3.40 ಲಕ್ಷ ನಿಗದಿ ಮಾಡಲಾಗಿದೆ,ಜಿಲ್ಲಾ ಅನುದಾನದಲ್ಲಿ 1.30 ಲಕ್ಷ ರಂತೆ 10 ಶಾಲೆಗಳಲ್ಲಿ ಸ್ಮಾರ್ಟ ಕ್ಲಾಸ್ ಮಾಡಲು ಕ್ರಮ ಕೈಗೊಳ್ಳಲಾಗುವುದು. ಇದಲ್ಲದೆ ಇತರೆ ಅಭಿವೃದ್ದಿ ಕೆಲಸ ಗಳಿಗೆ ಬಿಡುಗಡೆಯಾಗಿರುವ ಅನುದಾನ ಸೇರಿದಂತೆ ಒಟ್ಟು ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯಿAದ 8 ಕೋಟಿ ಅನುದಾನ ಬಂದAತಾAಗುತ್ತದೆ. ಶಾಲೆಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಲು ರಾಜ್ಯ ಹ್ಯಾಬಿಟೇಟ್ ಕೇಂದ್ರಕ್ಕೆ ನೀಡಲಾಗಿದೆ ಎಂದು ಅವರು ಹೇಳಿದರು.ಜನಸಾಮಾನ್ಯರು ಜಿಲ್ಲಾ ಕೇಂದ್ರಕ್ಕೆ, ತಾಲೂಕು ಕೇಂದ್ರಕ್ಕೆ ಬರಲು ದೂರವಾಗುತ್ತದೆ ಎಂದು ಸರ್ಕಾರ ತಮ್ಮ ಮನೆಬಾಗಿಲಿಗೆ ಬಂದು ಸಮಸ್ಯೆ ನಿವಾರಣೆ ಮಾಡಬೇಕು ಎಂದು ಹೋಬಳಿ ಮಟ್ಟದಲ್ಲಿ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳಿ ಎಂದರು.ವಿಜಯನಗರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅನುರಾಧ ಅವರು ಮಾತನಾಡಿ ಸರ್ಕಾರದ ಯೋಜನೆಗಳು ಕಟ್ಟ ಕಡೆಯ ನಾಗರೀಕರಿಗೂ ಸಿಗಬೇಕು ಹಾಗೂ ಇರುವ ಯೋಜನೆಗಳ ಬಗ್ಗೆ ಸಹ ಜನರಿಗೆ ಮಾಹಿತಿ ದೊರಕಬೇಕು ಆ ನಿಟ್ಟಿನಲ್ಲಿ ಜನತಾದರ್ಶನ ಹಮ್ಮಿಕೊಳ್ಳಲಾಗಿದೆ, ಅಧಿಕಾರಿಗಳು ಬದ್ದತೆಯಿಂದ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.