ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿದ ಜಿಲ್ಲಾ ಸಚಿವರು

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.4; ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್ಅವರು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಉದ್ಘಾಟಿಸಿದರು ಈ ಕಾರ್ಯಕ್ರಮದಲ್ಲಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಷಣ್ಮುಖಪ್ಪ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳಾದ ಡಾ. ರೇಣುಕರಾಧ್ಯಮತ್ತು ಜಿಲ್ಲಾ ಕುಟುಂಬ ಕಲ್ಯಾಣ ಡಾ. ರುದ್ರಸ್ವಾಮಿ  ತಾಲೂಕು ಆರೋಗ್ಯ ಅಧಿಕಾರಿಗಳು ದೇವರಾಜ್ ಪೆಟ್ಟಿಗೆ, ವೈದ್ಯಧಿಕಾರಿಗಳಾದ ಡಾ. ರಾಘವೇಂದ್ರ, ಮಹಾನಗರ ಪಾಲಿಕೆಯ ಸದಸ್ಯರಾದ ಮಂಜುನಾಥ್ ಗಡಿಗುಡಾಳ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಡಾ. ಸುರೇಶ್ ಬಾರ್ಕಿ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಮತ್ತು ಮಕ್ಕಳ ತಾಯಂದಿರು ಹಾಜರಿದ್ದರು