ರಾಯಲ್ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕೋತ್ಸವ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಮಾ.04: ತಾಲ್ಲೂಕಿನ ಕಿಕ್ಕೇರಿ ಪಟ್ಟಣದ ರಾಯಲ್ ಪಬ್ಲಿಕ್ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವನ್ನು ಆಯೋಜನೆ ಮಾಡಲಾಗಿತ್ತು.
ಕಾರ್ಯಕ್ರಮವನ್ನು ಸಮಾಜ ಸೇವಕರು, ರಾಜ್ಯ ಆರ್ ಟಿ ಓ ಸಂಘದ ರಾಜ್ಯದ್ಯಕ್ಷರಾದ ಮಲ್ಲಿಕಾರ್ಜುನ್ ಉದ್ಘಾಟಿಸಿ ಮಾತನಾಡಿ ಮಕ್ಕಳು ತಂದೆ ತಾಯಿಯೊಂದಿಗಿಂತ ಹೆಚ್ಚಿನ ಸಮಯ ಶಿಕ್ಷಕರೊಂದಿಗೆ ಶಾಲೆಯಲ್ಲಿ ಕಳೆಯುತ್ತಾರೆ. ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರುವುದರಿಂದ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವಂತೆ ಹೇಳಿದರು. ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆ ಅಷ್ಟೇ ಮುಖ್ಯ. ಪ್ರತಿಯೊಬ್ಬ ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಂಡು ಉನ್ನತ ವ್ಯಾಸಂಗ ಪಡೆದು ಸಮಾಜಕ್ಕೆ ಮಾದರಿಯ ಪ್ರಜೆಗಳಾಗಿ ಹೊರಹೊಮ್ಮಬೇಕು ಎಂದು ತಿಳಿಸಿದರು.
ಕಿಕ್ಕೇರಿ ಪೆÇೀಲೀಸ್ ಠಾಣೆಯ ಇನ್ಸ್ಪೆಕ್ಟರ್ ರೇವತಿ ರವರು ಮಾತನಾಡಿ ಮಕ್ಕಳು ಈಗಿನಿಂದಲೇ ಶಿಸ್ತು ಕ್ರಮವನ್ನು ಅನುಸರಿಸಬೇಕು. ಯಾವುದೇ ಕೆಟ್ಟ ಚಟಗಳಿಗೆ ತುತ್ತಾಗದೆ ಕೆಟ್ಟಚಟಗಳಿಂದ ದೂರ ಉಳಿಯಬೇಕು ಅಲ್ಲದೆ ತಮ್ಮ ತಂದೆ ತಾಯಿಯರನ್ನು ಗೌರವಿಸುವುದನ್ನು ಮೈಗೂಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಿ ಎಲ್ಲರೂ ತಮ್ಮ ಶಿಕ್ಷಣ ಮುಗಿಸಿಕೊಂಡು ದೇಶಕ್ಕೆ ಒಳ್ಳೆಯ ಪ್ರಜೆಗಳಾಗಬೇಕು ಎಂದು ಮಕ್ಕಳಿಗೆ ಕಿವಿ ಮಾತು ಹೇಳಿದರು.
ಇದೇ ಸಂದರ್ಭದಲ್ಲಿ ರಾಜ್ಯ ಆರ್.ಟಿ.ಓ ಸಂಘದ ರಾಜ್ಯಾದ್ಯಕ್ಷರಾದ ಮಲ್ಲಿಕಾರ್ಜುನ್ ಮತ್ತು ಸರ್ಕಲ್ ಇನ್ಸ್ಪೆಕ್ಟರ್ ರೇವತಿಯವರಿಗೆ ಶಾಲೆಯ ವತಿಯಿಂದ ವಿಷೇಷವಾಗಿ ಸನ್ಮಾನಿ ಗೌರವಿಸಲಾಯಿತುಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕವೃಂದದವರು, ವಿದ್ಯಾರ್ಥಿಗಳು, ಪೆÇೀಷಕರು ಸೇರಿದಂತೆ ಸಾರ್ವಜನಿಕರು ಇದ್ದರು.