ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದೆ: ಡಾ. ಹಾಲನೂರು ಎಸ್.ಲೇಪಾಕ್ಸ್
ಸಂಜೆವಾಣಿ ವಾರ್ತೆ
ಚಾಮರಾಜನಗರ ಮಾ.04-ಸರ್ಕಾರದ ಯಾವುದೇ ಅನುದಾನ ಇಲ್ಲದೇ ಶೇ48ರಷ್ಟು ಖಾಸಗಿ ಶಾಲೆಗಳು ಮಕ್ಕಳಿಗೆ ಮೂಲ ಭೂತ ಸೌಕರ್ಯದೊಂದಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ತನ್ನದೇ ಆದ ಕೊಡುಗೆ ನೀಡುತ್ತಾ ಬಂದಿದೆ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯಧ್ಯಕ್ಷ ಡಾ. ಹಾಲನೂರು ಎಸ್.ಲೇಪಾಕ್ಸ್ ತಿಳಿಸಿದರು.
ನಗರದ ನಿಜಗುಣ ರೆಸಿಡೆನ್ಸಿಯಲ್ಲಿ ನಡೆದ ಮಾನ್ಯತೆ ಪಡೆದ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ ಜಿಲ್ಲಾ ಘಟಕ ಮತ್ತು ತಾಲೂಕು ಘಟಕಗಳ ಉದ್ಘಾಟನೆ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೊರೋನಾ ಸಮಯದಲ್ಲಿ ಸಂಘಟನೆ ವತಿಯಿಂದ ಸರ್ಕಾರಕ್ಕೆ ಶಿಕ್ಷಕರಿಗೆ ಕಲ್ಯಾಣ ನಿಧಿ ಹಾಗೂ ವಿದ್ಯಾರ್ಥಿಗಳಿಗೂ ವೆಲ್‍ಫೇರ್ ಫಂಡ್ ನೀಡುವಂತೆ ಮನವಿ ಮಾಡಲಾಗಿತ್ತು, ಅದರಂತೆ ಖಾಸಗಿ ಶಾಲಾ ಶಿಕ್ಷಕರಿಗೆ ಪರಿಹಾರ ನೀಡಲಾಯಿತು, ಇದು ನಮ್ಮ ರುಪ್ಸಾ ಹೋರಾಟದ ಪ್ರತಿಫಲ, ಅಲ್ಲದೇ ಹಳೆ ಶಾಲಾ ಕಟ್ಟಡಗಳಿಗೆ ಅಗ್ನಿ ಸುರಕ್ಷತೆ ಕುರಿತು ವಿನಾಯಿತಿ ನೀಡಬೇಕು, ಶಾಲೆಗಳ ಮಾನ್ಯತಾ ನವೀಕರಣವನ್ನು 10 ವರ್ಷಗಳಿಗೆ ವಿನಾಯಿತಿ ನೀಡಬೇಕೆಂದು ಮನವಿ ಸಲ್ಲಿಸಲಾಗಿದೆ, ಅದು ಕೆಲವು ದಿನಗಳಲ್ಲಿ ಈಡೇರಲಿದೆ ಎಂದು ತಿಳಿಸಿದರು.ಸಂಘವನ್ನು ಮತ್ತಷ್ಟು ಬಲ ಪಡಿಸಲು ಎಲ್ಲರು ಸಹಕಾರ ನೀಡಬೇಕೆಂದು ತಿಳಿಸಿದರು.
ಹನೂರು ಶಾಸಕ ಎಂ.ಆರ್. ಮಂಜುನಾಥ್ ಅವರು ಮಾತನಾಡಿ, ರುಪ್ಸದ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇನೆ, ಇದು ಗಡಿ ಜಿಲ್ಲೆ ಬಹಳಷ್ಟು ಸಮಸ್ಯೆಗಳು ಇದೆ,
ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ರುಪ್ಸಾ ಸಂಘಟನೆಗಳ ಪದಾಧಿಕಾರಿಗಳಿಗೆ ಗೌರವಿಸಿ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ರುಪ್ಸಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಶಿಧರ್ ದಿಂಡೂರ್, ರಾಜ್ಯ ನಿರ್ದೆಶಕ ಎಸ್.ಗಂಗಾಧರ್, ಲಿಂಗರಾಜು, ಗೌರವ ಆಧ್ಯಕ್ಷ ಎಸ್. ರಮೇಶ್, ರಾಜೇಂದ್ರನ್ ಎಂ, ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ನಂಜುಂಡಸ್ವಾಮಿ ಎನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ನಿರ್ದೇಶಕ ಮಂಜುನಾಥ್ ಡಿ, ಹಾಗೂ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳು, ಸದಸ್ಯರು ಇದ್ದರು.