ಪಲ್ಸ್ ಪೆÇೀಲಿಯೊ ಅಭಿಯಾನಕ್ಕೆ ಸಚಿವ ಡಾ.ಎಂ.ಬಿ.ಪಾಟೀಲ ಚಾಲನೆ
ಸಂಜೆವಾಣಿ ವಾರ್ತೆ,
ವಿಜಯಪುರ, ಮಾ.4: ಜಿಲ್ಲೆಯಲ್ಲಿ ಮಾರ್ಚ್ 3 ರಿಂದ 6ವರೆಗೆ ಹಮ್ಮಿಕೊಂಡ ಪೆÇೀಲಿಯೋ ಲಸಿಕಾ ಅಭಿಯಾನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಅವರು ಚಾಲನೆ ನೀಡಿದರು.
ಭಾನುವಾರ ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಮಹಾಪೌರರಾದ ಮಹೇಜಬಿನ್ ಹೊರ್ತಿ ಅವರೊಂದಿಗೆ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯ 0ರಿಂದ 5 ವರ್ಷದೊಳಗಿನ 2,95,156 ಮಕ್ಕಳಿಗೆ ಪಲ್ಸ್ ಪೆÇೀಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಪಲ್ಸ್ ಪೆÇೀಲಿಯೋ ನಿರ್ಮೂಲನೆಯಲ್ಲಿ ದೇಶ ಗಣನೀಯ ಸಾಧನೆ ಮಾಡಿದೆ. ಈ ನಿಟ್ಟಿನಲ್ಲಿ ಪೆÇೀಲಿಯೋ ನಿರ್ಮೂಲನೆಗೆ ಜಿಲ್ಲೆಯಾದ್ಯಂತ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು ಯಾವುದೇ ಮಗು ಪೆÇೀಲಿಯೋ ಲಸಿಕೆಯಿಂದ ವಂಚಿತರಾಗದೆ ನಿಗದಿತ ಗುರಿ ಸಾಧಿಸುವಂತೆ ಅವರು ಹೇಳಿದರು.
ನಗರ ಪ್ರದೇಶ ಸೇರಿದಂತೆ ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಪೆÇೀಲಿಯೋ ಲಸಿಕೆ ಹಾಕಲು ಗಂಭೀರವಾಗಿ ಹಾಗೂ ವಿಶೇಷ ಕಾಳಜಿ ವಹಿಸಿ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಅವರು ಕರೆ ನೀಡಿದರು.
ಆರೋಗ್ಯ ಇಲಾಖೆಯ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ನಗರ ನಸಿರ್ಂಗ್ ಹಾಗೂ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನು ಒಳಗೊಂಡು ತಂಡಗಳನ್ನು ರಚಿಸಲಾಗಿದ್ದು, ವ್ಯಾಕ್ಸಿನೆಟರಗಳು ಹಾಗೂ ಮೇಲ್ವಿಚಾರಣೆಗಾಗಿ ಸಿಬ್ಬಂದಿ ನೇಮಿಸಲಾಗಿದೆ ಮತ್ತು ತಾಲೂಕಾ ನೋಡಲ್ ಅಧಿಕಾರಿಗಳನ್ನು ಆಯಾ ತಾಲೂಕುಗಳಿಗೆ ಮೇಲ್ವಿಚಾರಣೆ ಮಾಡಲು ಅದರಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳು ಆಯಾ ಭಾಗದ ಉಸ್ತುವಾರಿ ಹೊಂದಿರುತ್ತಾರೆ. ಜಿಲ್ಲೆಯ 0-5 ವರ್ಷದ ಮಕ್ಕಳನ್ನು ಗುರುತಿಸಿ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಅವರು ಹೇಳಿದರು.
ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮಾತನಾಡಿ ಜಿಲ್ಲೆಯ ಎಲ್ಲ 0-5 ವರ್ಷದ ಮಕ್ಕಳಿಗೆ ಲಸಿಕೆ ಹಾಕಬೇಕು. ಜಿಲ್ಲೆಯಲ್ಲಿ 2,95,156 5 ವರ್ಷದೊಳಗಿನ ಮಕ್ಕಳಿದ್ದಾರೆ. ವಿಜಯಪುರ ನಗರದ ಜನಸಂಖ್ಯೆ 5,41,675 ಇದೆ. ಈಗಾಗಲೇ ಜಿಲ್ಲಾಡಳಿತ, ಜಿಲ್ಲಾ ಆಸ್ಪತ್ರೆ ಉತ್ತಮವಾಗಿ ಕಾರ್ಯ ನಿರ್ವಹಿಸುವ ಮೂಲಕ ಕಾಯಕಲ್ಪ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಕೊರೋನಾ ಸಂದರ್ಭದಲ್ಲಿ ಜಿಲ್ಲೆಯ ವೈದ್ಯರು ಹಗಲು ರಾತ್ರಿ ಕಾರ್ಯ ನಿರ್ವಹಿಸುವ ಮೂಲಕ ಮಾದರಿಯಾಗಿದ್ದಾರೆ. ಭಾರತ ದೇಶವನ್ನು 2014ರಂದು ಪೆÇೀಲಿಯೋ ಮುಕ್ತ ಭಾರತವೆಂದು ಘೊಷಿಸಿದೆ. ಆದ್ಯಾಗ್ಯೂ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಅಭಿಯಾನ ಹಮ್ಮಿಕೊಂಡಿದ್ದು, ಅಭಿಯಾನದ ಸದುಪಯೋಗ ಪಡೆದುಕೊಂಡು ಸಾರ್ವಜನಿಕರು ತಮ್ಮ ಮಕ್ಕಳಿಗೆ ಪೆÇೀಲೀಯೋ ಲಸಿಕೆ ಹಾಕಿಸುವ ಮೂಲಕ ಪೆÇೀಲಿಯೋ ನಿರ್ಮೂಲನೆಗೆ ಸಹಕರಿಸುವಂತೆ ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಉಪಮಹಾಪೌರರಾದ ದಿನೇಶ ಹಳ್ಳಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ, ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಆರ್.ಸಿ.ಎಚ್. ಡಾ.ಕೆ.ಡಿ.ಗುಂಡಬಾವಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.