ಜನಸ್ಪಂದನ ಸಭೆ ಮಾ.7ಕ್ಕೆ ಮುಂದೂಡಿಕೆ
ಕಲಬುರಗಿ:ಮಾ.3: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಇದೇ ಮಾ.5 ರಂದು ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ನಡೆಸಲು ಉದ್ದೇಶಿಸಲಾದ ಜನಸ್ಪಂದನ ಸಭೆ ಅನಿವಾರ್ಯ ಕಾರಣದಿಂದ ಮಾರ್ಚ್ 7ಕ್ಕೆ ಮುಂದೂಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.