ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಿ:ಶಾಸಕ ಅಲ್ಲಮಪ್ರಭು ಪಾಟೀಲ್
ಕಲಬುರಗಿ:ಮಾ.03: ಭಾರತ ಪೋಲಿಯೋ ಮುಕ್ತ ದೇಶವಾಗಿದ್ದು, ಜಗತ್ತಿಗೆ ಮಾದರಿಯಾಗಿದೆ. ಮಾರಕ ಅಂಗವಿಕಲತೆ ರೋಗದ ಮುಂಜಾಗ್ರತೆ ಹಾಗೂ ಪರಿಶ್ರಮದಿಂದ ಪೋಲಿಯೋ ಮುಕ್ತ ರಾಷ್ಟ್ರ ಎಂದು ಹೆಸರುವಾಸಿಯಾಗಿದೆ ಎಂದು ಶಾಸಕ ಅಲ್ಲಮಪ್ರಭು ಪಾಟೀಲ್ ಕರೆ ನೀಡಿದರು.
ಬಾನುವಾರ ನಗರದ ಹೀರಾಪೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾಡಳಿತ ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆರ್ ಸಿ ಹೆಚ್ ವಿಭಾಗದಿಂದ ಇವುಗಳ ಸಂಯುಕ್ತಾಶ್ರಯದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಯೊರೊಬ್ಬರು ಅಂಗವಿಕಲತೆ ಹೊಂದಬಾರದು ಎನ್ನುವ ಸದುದ್ದೇಶದಿಂದ ಸರಕಾರ ಪೋಲಿಯೋ ಲಸಿಕೆ ಹಾಕಿಸುವ ಅಭಿಯಾನ ಹಮ್ಮಿಕೊಂಡಿದೆ ಇದರ ಉಪಯೋಗ ಪ್ರತಿಯೊಬ್ಬರು ಮಕ್ಕಳು ಪಡೆದುಕೊಳ್ಳಬೇಕು. ಜಿಲ್ಲೆಯ ಎಲ್ಲಾ ತಾಯಿಂದಿರು ಮನೆಯಲ್ಲಿ ಕುಡದೆÀ ಹೊರಗೆ ಬಂದು ಮಕ್ಕಳಿಗೆ ಪೋಲಿಯೋ ಲಸಿಕೆ ತಪ್ಪದೇ ಹಾಕಿಸಬೇಕು ಎಂದು ಸಾರ್ವಜನಿಕರಲ್ಲಿ ಕಳಕಳಿಯ ಮನವಿ ಮಾಡಿದರು.
ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಶಾಶ್ವತವಾಗಿ ಪೋಲಿಯೋ ಮುಕ್ತ ಜಿಲ್ಲೆ ಮಾಡಲು ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ಮುತವರ್ಜಿ ವಹಿಸಿ ಕೆಲಸ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪೋಲಿಯೋ ಲಿಸಿಕೆ ಅಭಿಯಾನ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.