ಹಬೋಹಳ್ಳಿ : ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕರಿಂದ ಚಾಲನೆ
ಸಂಜೆವಾಣಿ ವಾರ್ತೆ
 ಹಗರಿಬೊಮ್ಮನಹಳ್ಳಿ. ಮಾ.03 ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಐದು ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಕ್ಷೇತ್ರದ ಶಾಸಕ ಕೆ ನೇಮಿರಾಜ್ ನಾಯ್ಕ್ ಮಕ್ಕಳಿಗೆ ಪೋಲಿಯೋ ಲಸಿಕೆ  ಹಾಕುವ ಮೂಲಕ ಚಾಲನೆ ನೀಡಿದರು.
 ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಂದು  ಹಮ್ಮಿಕೊಳ್ಳಲಾಗಿದ್ದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿ ಪೋಲಿಯೋ ಮುಕ್ತ ದೇಶವನ್ನಾಗಿ ಮಾಡಲು ಐದು ವರ್ಷದ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಈ ಒಂದು ಅಭಿಯಾನದಲ್ಲಿ ಎಲ್ಲಾ ಪಾಲಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ ಪೋಲೆಯೋ ಮುಕ್ತಗೊಳಿಸಬೇಕು ಎಂದರು.
 ಈ ಸಂದರ್ಭದಲ್ಲಿ ಟಿ ಎಚ್ಒ ಡಾ. ಶಿವರಾಜ್, ಮುಖ್ಯ ವೈದ್ಯಧಿಕಾರಿ  ಡಾ. ಅಚ್ಚುತರಾವ್, ಜೆಡಿಎಸ್ ಮುಖಂಡರಾದ ವೈ ಮಲ್ಲಿಕಾರ್ಜುನ ಇತರರಿದ್ದರು
One attachment • Scanned by Gmail