ಐದು ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಲು ಕರೆ
ಸಂಜೆವಾಣಿ ವಾರ್ತೆ
ಬಳ್ಳಾರಿ, ಮಾ.03: ಮಕ್ಕಳ ಆರೋಗ್ಯ ಹಾಗೂ ಭವಿಷ್ಯದ ಹಿತ ದೃಷ್ಟಿಯಿಂದ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಚೇಳ್ಳಗುರ್ಕಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿರಿಯ ಅಧಿಕಾರಿಗಳಾದ ಚಂದ್ರಕಲಾ ಹೇಳಿದರು.
ತಾಲೂಕಿನ ಶ್ರೀ ಕ್ಷೇತ್ರ ಚೇಳ್ಳಗುರ್ಕಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಪೋಲಿಯೋ ಲಸಿಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕರ್ನಾಟಕ ರಾಜ್ಯ ಕ್ರಿಯಾಶೀಲ ಶಿಕ್ಷಕರ ವೇದಿಕೆ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷ ರವಿಚೇಳ್ಳಗುರ್ಕಿ ಮಗುವಿಗೆ ಲಸಿಕೆ ಹಾಕುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಐದು ವರ್ಷದೊಳಗಿನ ಎಲ್ಲಾ ಮಕ್ಕಳು ಲಸಿಕೆಯಿಂದ ವಂಚಿತರಾಗಬಾರದು.ಆ ನಿಟ್ಟಿನಲ್ಲಿ ಆರೋಗ್ಯ ಕೇಂದ್ರದ ಸಿಬ್ಬಂದಿ ಶ್ರಮಿಸಬೇಕು ಜೊತೆಗೆ ಪೋಲಿಯೋ ಮುಕ್ತ ಗ್ರಾಮ ಮಾಡಬೇಕೆಂದು ಹೇಳಿದರು.
ಸ್ಟಾಪ್ ನರ್ಸ್ ಮಾಧವಿ, ಸುಜಾತಾ, ಜಯಶ್ರೀ, ಎಚ್. ಟಿ. ನಿತೀಶ್ ಮುಂತಾದವರು ಉಪಸ್ಥಿತರಿದ್ದರು