ಪಲ್ಸ್ ಪೋಲಿಯೊ ಲಸಿಕೆ ಹಾಕಿದ ಸಚಿವ ನಾಗೇಂದ್ರ
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ,ಮಾ.03: ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಜಿಲ್ಲಾ‌ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದರು.
ಇದೇ ಸಂದರ್ಭದಲ್ಲಿ ಲಸಿಕಾ ಕೇಂದ್ರಕ್ಕೆ ಬಂದ ಮಕ್ಕಳಿಗೆ ಚಾಕೊಲೇಟ್ ಹಂಚಿದರಲ್ಲದೆ ಕೇಂದ್ರಕ್ಕೆ ಬರುವ ಪ್ರತಿಯೊಬ್ಬ ಮಗುವಿಗೂ ಚಾಕೊಲೇಟ್ ಹಂಚುವಂತೆ ಆರೋಗ್ಯ ಸಿಬ್ಬಂದಿಗೆ ಸೂಚಿಸಿ ಚಾಕೊಲೇಟ್ ಬಾಕ್ಸ್  ನೀಡಿದರು.
ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಆರ್ ಸಿ ಅಧಿಕಾರಿ ಡಾ.ಅನೀಲ್ ಕುಮಾರ್ ಮೊದಲಾದವರು ಇದ್ದರು.