ಟ್ಯಾಂಕರ್ ಮೂಲಕ ನೀರು ಪೂರೈಸಲು ಸೂಚನೆ
ಗದಗ,ಮಾ.3: ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆಯಲ್ಲಿ ನಿಘಾ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಕುಡಿಯುವ ನೀರಿನ ಕುರಿತು ಸಭೆ ನಡೆಸಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ಜಿಲ್ಲೆಯ ಅಗತ್ಯವಿರುವ ನೀರಿನ ಬಗ್ಗೆ ದೀರ್ಘವಾಗಿ ಚರ್ಚೆ ಮಾಡಿದ್ದು, ಸಿಂಗಟಾಲೂರು ಬ್ಯಾರೇಜಿನಲ್ಲಿ ಒಟ್ಟು 1 ಟಿಎಂಸಿ ನೀರು ಲಭ್ಯವಿದೆ. ಅದರಲ್ಲಿ 0.5 ಟಿಎಂಸಿ ಡೆಡ್ ಸ್ಟೋರೆಜ್ ಬಿಟ್ಟು, 0.5 ಟಿಎಂಸಿ ನೀರನ್ನು ಉಪಯೋಗಿಸಬಹುದಾಗಿದೆ. 0.02 ಟಿಎಂಸಿ ನೀರು ಪ್ರತಿದಿನ ಅವಶ್ಯವಿದ್ದು, ಕನಿಷ್ಠ 50 ದಿನಗಳ ವರೆಗೆ ನೀರು ಪೂರೈಕೆ ಮಾಡಬಹುದಾಗಿದೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಜಿಲ್ಲಾ ಪೆÇೀಲಿಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ್, ವಾರ್ತಾಧಿಕಾರಿ ವಸಂತ ಮಡ್ಲೂರ, ತಹಶಿಲ್ದಾರ ಶ್ರೀನಿವಾಸ ಮೂರ್ತಿ ಕುಲಕರ್ಣಿ ಹಾಜರಿದ್ದರು.