ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಆದ್ಯತೆ :ಡಾ. ಶೈಲೇಂದ್ರ ಬೆಲ್ದಾಳೆ
ಬೀದರ:ಮಾ.3:ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡುವುದರ ಜತೆಗೆ ಕಾಲಮಿತಿಯಲ್ಲಿ ಕಾಮಗಾರಿ ಉತ್ತಮವಾಗಿ ಪೂರ್ಣಗೊಳಿಸಿ, ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಹೀಗಾಗಿ ಅಧಿಕಾರಿಗಳು ಕಾಮಗಾರಿ ಕಡೆ ನಿಗಾ ವಹಿಸಬೇಕು ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾದ ಡಾ. ಶೈಲೇಂದ್ರ ಬೆಲ್ದಾಳೆ ಅವರು ಹೇಳಿದರು.
ಬೀದರ್ ದಕ್ಷಿಣ ಕ್ಷೇತ್ರದ ಚಿಟ್ಟಾ, ಚಿಟ್ಟಾ ವಾಡಿ ಗ್ರಾಮದ ಮುಖ್ಯ ರಸ್ತೆಯಿಂದ ಗೋರನಳ್ಳಿ ಗ್ರಾಮಕ್ಕೆ ಕೂಡುವ ರಸ್ತೆಯ (ಲಿಂಗರಾಜಪ್ಪಾ ಇಂಜಿನಿಯರಿಂಗ್ ಕಾಲೇಜ ಮಾರ್ಗದ ರಸ್ತೆ) ಡಾಂಬರೀಕರಣ ರಸ್ತೆ ಸುಮಾರು 80 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಈ ರಸ್ತೆ ಡಾಂಬರೀಕರಣ ಕಾಮಗಾರಿಗೆ ಹಲವು ದಿನಗಳಿಂದಲೂ ಜನತೆ ಮನವಿ ಮಾಡುತ್ತಾ ಬಂದಿದ್ದರು. ಇದೀಗ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಕಾಮಗಾರಿಗೆ ಚಾಲನೆ ನೀಡುತ್ತಿದ್ದೇನೆ. ಸುಮಾರು 80 ಲಕ್ಷ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗಿದೆ ಶೀಘ್ರದಲ್ಲೇ ಕಾಮಗಾರಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದು ಎಂದರು. ಕ್ಷೇತ್ರದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಸರ್ಕಾರದಿಂದ ಅಗತ್ಯ ಅನುದಾನ ತಂದು ಅಭಿವೃದ್ಧಿ ಪಡಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದರು. ಈ ರಸ್ತೆ ಉತ್ತಮವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಸುತ್ತಲಿನ ಗ್ರಾಮದ ವಾಹಾನ ಸವಾರರು ಗ್ರಾಮಸ್ಥರು ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮುಖಂಡರಾದ ಸುರೇಶ ಮಾಶೆಟ್ಟಿ, ಶಿವಕುಮಾರ ಸ್ವಾಮಿ, ಪ್ರಶಾಂತ ಬೇಮಳಖೇಡಾ, ಉದಯಕುಮಾರ ತೋರಣ, ಆನಂದ ಪಾಟೀಲ, ಚಂದ್ರಕಾಂತ ವಾಡಿ, ಮಲ್ಲಿಕಾರ್ಜುನ್ ಚಿಟ್ಟಾ ವಾಡಿ, ವೈಜಿನಾಥ ಚಿಟ್ಟಾ ವಾಡಿ, ಶಿವಕುಮಾರ ಪಾಟೀಲ, ಶ್ರೀಕಾಂತ, ಕಂಟೆಪ್ಪ, ಧನರಾಜ್, ಲಿಂಗರಾಜಪ್ಪಾ ಇಂಜಿನಿಯರಿಂಗ್ ಕಾಲೇಜ ಪ್ರಾಂಶುಪಾಲರು ಡಾ. ವೀನಿತಾ ಪಾಟೀಲ್, ಡಾ. ಸತೀಶ ಪ್ರತಾಪುರೆ, ಪೆÇ್ರೀ ಸಂದೀಪ ಮಾಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.