ಜಿಲ್ಲಾ ವಕ್ರ್ಪ್ ಬೋರ್ಡ್ ಉಪಾಧ್ಯಕ್ಷರಾಗಿ ಅಪ್ಜಲ್ ಷರೀಫ್ ನೇಮಕ
ಸಂಜೆವಾಣಿ ವಾರ್ತೆ
ಚಾಮರಾಜನಗರ, ಮಾ. 03- ಚಾಮರಾಜನಗರ ಜಿಲ್ಲಾ ವಕ್ಪ್ ಬೋರ್ಡ್ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ವಿಭಾಗದ ಅಧ್ಯಕ್ಷ ಅಪ್ಜಲ್ ಷರೀಫ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.
ವಸತಿ ಹಾಗೂ ವಕ್ಪ್ ಸಚಿವ ಜಮೀರ್ ಅಹಮದ್, ಸಿಎಂ ಅವರ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹಮದ್, ರಾಜ್ಯ ವಕ್ಪ್ ಮಂಡಲಿ ಅಧ್ಯಕ್ಷ ಅನ್ವರ್ ಪಾಷಾ, ಜಿಲ್ಲಾ ಉಸ್ತುವಾರಿ ಸಚಿವÀ ಕೆ. ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಸ್. ಗಣೇಶ್ ಪ್ರಸಾದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅವರ ಶಿಫಾರಸ್ಸಿನ ಮೇರೆಗೆ ಚಾಮರಾಜನಗರ ಜಿಲ್ಲಾ ವಕ್ಪ್ ಬೋರ್ಡ್ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.