ಬಡವರ ಆರ್ಥಿಕ ಸಬಲೀಕರಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಮಾ.೩; ರಾಜ್ಯ ಸರ್ಕಾರದಿಂದ ಬಡವರಿಗೆ, ಶೋಷಿತ ವರ್ಗದವರ ಆರ್ಥಿಕ ಸಬಲೀಕರಣಕ್ಕಾಗಿ, ಆರ್ಥಿಕ ಚೈತನ್ಯ ನೀಡುವ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ “ಸರ್ವರಿಗೂ ಸೂರು” ಯೋಜನೆಯಡಿ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ನಿರ್ಮಾಣವಾದ 700 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಚ್ರ್ಯುಯಲ್ ಮುಖಾಂತರ ಲೋಕಾರ್ಪಣೆ ಹಾಗೂ ಮನೆ ಹಂಚಿಕೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.“ಸರ್ವರಿಗೂ ಸೂರು” ಯೋಜನೆಯಡಿ  ವಸತಿ ರಹಿತರು ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದು, ವಸತಿ ರಹಿತರು ಯಾರೂ ಸಹ ನಿರಾಸೆ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮನೆಗಳ ಮಂಜೂರಾತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.