ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳನ್ನುಬಗೆಹರಿಸಲು ಜಿಲ್ಲಾ ಮಟ್ಟದ ಸಹಾಯವಾಣಿ ಆರಂಭ
ಕಲಬುರಗಿ:ಮಾ.02: ಪ್ರಸ್ತುತ 2024-25ನೇ ಸಾಲಿನ ಬೇಸಿಗೆ ಕಾಲದಲ್ಲಿ ಗ್ರಾಮೀಣ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅನುಕೂಲವಾಗುವಂತೆ ಕಲಬುರಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಹಾಯವಾಣಿ (HELP LINE) ಪ್ರಾರಂಭಿಸಲಾಗಿದೆ.
ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳಿದ್ದಲ್ಲಿ ಸಹಾಯವಾಣಿ ಕೇಂದ್ರದ ಸಿಬ್ಬಂದಿಯಾದ (ಆಪ್ತ ಸಹಾಯಕ) ಪ್ರಜ್ವಲ್ ಇವರನ್ನು (ಸಹಾಯವಾಣಿ ಸಂಖ್ಯೆ) 7760009789 ಗೆ ಸಂಪರ್ಕಿಸಬೇಕೆಂದು ಕಲಬುರಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.