ಸಿಂದಗಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ಸಸಿ ನೆಡುವ ಕಾರ್ಯಕ್ರಮ
ವಿಜಯಪುರ,ಸೆ.16: ಜಿಲ್ಲೆಯ ಸಿಂದಗಿ ನಗರದ ಹೊರ ವಲಯದಲ್ಲಿರುವ ಕೆಎಸ್‍ಆರ್‍ಟಿಸಿ ಬಸ್ ಡಿಪೆÇೀ ಆವರಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ತಾಲೂಕಾ ಕಾರ್ಯ ನಿರ್ವಾಹಕ ಅಧಿಕಾರಿ ರಾಮು ಅಗ್ನಿ ಅವರ ಅಧ್ಯಕ್ಷತೆಯಲ್ಲಿ ಹೆಚ್.ಜಿ. ಕನ್ಯಾ ಪ್ರೌಢ ಶಾಲೆ ವಿದ್ಯಾರ್ಥಿನಿಯರಿಂದ ನಾಡಗೀತೆ ಹಾಡುವದರ ಮೂಲಕ ಚಾಲನೆ ಮಾಡಲಾಯಿತು.
ಕೆಎಸ್‍ಆರ್‍ಟಿಸಿ ಬಸ್ ಡಿಪೆÇೀ ವಸತಿ ನಿಲಯ ಆವರಣದಲ್ಲಿ ಸುಮಾರು 3200 ಸಸಿ ನೆಡುವ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವುದರÀ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ನಂತರ ಸಂವಿಧಾನದ ಪೀಠಿಕೆ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಆಲಮೇಲ ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಫರೀದ ಪಠಾಣ, ಕ್ಷೇತ್ರ ಶಿಕ್ಷಣಾಧಿಕಾರಿ ಆರಿಫ್ ಬಿರಾದಾರ, ಅರಣ್ಯ ಇಲಾಖೆ ಅಧಿಕಾರಿ ರಾಜೀವ ಬಿರಾದಾರÀ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಅಶೋಕ ಲಾಳಸಂಗಿ ಸ್ವಾಗತಿಸಿದರು. ಆರ್‍ಎಫ್‍ಒ ಪ್ರಿಯಾಂಕ ವಂದಿಸಿದರು.