ಮಾ.೩,೪ ಶ್ರೀರೇಣುಕಾ ಯಲ್ಲಮ್ಮ ದೇವಾಲಯದ ವಾರ್ಷಿಕೋತ್ಸವ
ಆನೇಕಲ್.ಮಾ.೨:ಮಂಚನಹಳ್ಳಿ ಗ್ರಾಮದ ಬಳಿಯಿರುವ ಇತಿಹಾಸ ಪ್ರಸಿದ್ದ ದೇವಾಲಯವಾದ ಶ್ರೀ ಮಹಿಷಿ ಮರ್ದಿನಿ ದೇವಿ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯದ ೧೩ ನೇ ವರ್ಷದ ವಾರ್ಷಿಕೋತ್ಸವ ಸಮಾರಂಭವನ್ನು ಮಾರ್ಚ್ ೦೩ ಮತ್ತು ೪ ರಂದು ಭಕ್ತರ ಸಮ್ಮುಖದಲ್ಲಿ ಶ್ರದ್ದಾಭಕ್ತಿಯಿಂದ ನಡೆಯಲಿದೆ.
ವಿಶೇಷವಾಗಿ ವಿಶೇಷ ಹೋಮ, ವಿಶೇಷ ಪೂಜೆ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಒಂದು ಕಾರ್ಯಕ್ರಮದಲ್ಲಿ ಅನೇಕ ಸ್ವಾಮಿಗಳು, ಗಣ್ಯರು, ಜನಪ್ರತಿನಿಧಿಗಳು ಬಾಗವಹಿಸಲಿದ್ದು ಸಕಾಲಕ್ಕೆ ಕ್ಷೇತ್ರದ ಜನತೆ ಹಾಗೂ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸ್ವಾಮಿ ಕೃಪೆಗೆ ಪಾತ್ರರಾಗುವಂತೆ ರಾಮಯ್ಯ ಸ್ವಾಮೀಜಿಗಳು ಹಾಗೂ ಶ್ರೀ ಮಹಿಷಿ ಮರ್ಧಿನಿ ದೇವಿ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸರ್ವೇಶ್ ರವರು ತಿಳಿಸಿದರು.