ಬಸ್ ಪಲ್ಟಿ, 30 ಮಂದಿಗೆ ಗಾಯ
ಸಂಜೆವಾಣಿ ವಾರ್ತೆ
ಚಾಮರಾಜನಗರ:ಮಾ.02- ಕಾರ್ಖಾನೆ ಬಸ್ ಪಲ್ಟಿಯಾಗಿ 30 ಮಂದಿ ಗಾಯಗೊಂಡ ಘಟನೆ ಚಾಮರಾಜನಗರದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಚಾಮರಾಜನಗರದ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ಕಲರ್ ಟ್ಯೂನ್ ಎಂಬ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಕಂಪನಿ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ತಿರುವಿನಲ್ಲಿ ಅವಘಡ ನಡೆದಿದೆ.
ಕರ್ತವ್ಯ ಮುಗಿಸಿದ್ದ
ಕಾರ್ಮಿಕರನ್ನು ಕರೆದೊಯ್ಯುವಾಗ ತಿರುವಿನಲ್ಲಿ ಬಸ್ ಪಲ್ಟಿಯಾಗಿದ್ದು ಗಾಯಗೊಂಡ 30 ಮಂದಿಯಲ್ಲಿ 4 ಮಂದಿಗೆ ಗಂಭೀರ ಪೆಟ್ಟು ಬಿದ್ದು ಐಸಿಯುಗೆ ದಾಖಲಾಗಿದ್ದಾರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದ್ದು
ಚಾಮರಾಜನಗರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.