ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ ದೇಶದ್ರೋಹಿ ಬಂಧನಕ್ಕೆ ಆಗ್ರಹ
ಕೊಲ್ಹಾರ:ಮಾ.2: ಕರ್ನಾಟಕದ ವಿಧಾನಸೌಧದಲ್ಲಿ ನಡೆದ ರಾಜ್ಯ ಸಭೆಯ ಚುನಾವಣೆಯ ಫಲಿತಾಂಶದ ನಂತರ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿಯಾದ ನಾಸೀರ ಹುಸೇನ್‍ರವರ ಪರವಾಗಿ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗುವ ಮೂಲಕ ದೇಶದ್ರೋಹವೆಸಗಿರುವುದು ತೀವ್ರ ಖಂಡನೀಯ ಎಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ತಾಲೂಕ ಅಧ್ಯಕ್ಷ ಮಹೇಶ್ ತುಂಬರಮಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ವಿಧಾನಸೌಧದಲ್ಲಿ ನಾಸೀರ್ ಹುಸೇನ್ ರವರ ಗೆಲುವಿನ ಸಂದರ್ಭದಲ್ಲಿ ಭಾರತದ ಕಟ್ಟಾ ವೈರಿ ರಾಷ್ಟ್ರವಾದ ಪಾಕಿಸ್ತಾನದ ಪರವಾಗಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವುದು ದೇಶದ್ರೋಹದ ಮನಸ್ಥಿತಿಯನ್ನು ಎತ್ತಿ ತೋರಿಸುತ್ತಿದೆ. ಕೂಡಲೇ ಸರ್ಕಾರ ಘೋಷಣೆ ಕೂಗಿದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆಗೆ ಗುರಿಪಡಿಸುವ ಮೂಲಕ ದೇಶದಿಂದ ಗಡಿಪಾರು ಮಾಡಬೇಕೆಂದು ವಿಶ್ವ ಹಿಂದೂ ಪರಿಷತ್ ಭಜರಂಗದಳ ದಿಂದ ಸರ್ಕಾರಕ್ಕೆ ಆಗ್ರಹಿಸುತ್ತದೆ ಎಂದರು
