ಯುವ ಶಿಕ್ಷಕರು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಕೈಜೋಡಿಸಬೇಕು; ಪ್ರೊ.ಡಿ.ಬಿ.ಕುಂಬಾರ

ಸಂಜೆವಾಣಿ ವಾರ್ತೆ
ದಾವಣಗೆರೆ.ಮಾ.೧; ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ದಾವಣಗೆರೆ ಇವರ ಸಹಯೋಗದೊಂದಿಗೆ ಗುರುವಾರ ಎಂ.ಬಿ.ಎ ಸಭಾಂಗಣದಲ್ಲಿ ಎಂ.ಪಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ತಂಬಾಕಿನಿಂದ ಆಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ-2003 ರ ಕಾಯ್ದೆಯ ಕುರಿತು ತರಬೇತಿ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು.ಕಾರ್ಯಗಾರವನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಕುಲಪತಿಗಳಾದ  ಪ್ರೊ. ಬಿ.ಡಿ. ಕುಂಬಾರ  ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ಮುಂದಿನ ದಿನಗಳಲ್ಲಿ ಶಿಕ್ಷಕ ವೃತ್ತಿ ಆರಂಬಿಸುವ ನೀವು ತಂಬಾಕಿನ ದುಷ್ಪರಿಣಾಗಳ ಬಗ್ಗೆ ಅರಿತು ಈ ಬಗ್ಗೆ ಸಮುದಾಯಕ್ಕೆ ತಲುಪಿಸುವ ಜವಾಬ್ದಾರಿ ನಿಮ್ಮದಾಗಿರುತ್ತದೆ. ನಿಮ್ಮಿಂದÀ ಸಾರ್ವಜನಿಕರಲ್ಲಿ ಪ್ರಜ್ಞೆ ಉಂಟಾಗಿ ಸ್ವಾಸ್ಥ್ಯ ಸಮಾಜ ನಿರ್ಮಿಸಬಹುದು. ತಂಬಾಕು ಉತ್ಪನ್ನ ತಯಾರಿಸುವ ಕಂಪನಿಯ ಮಾಲಿಕರು ಆಕಾಶದಲ್ಲಿ ಹಾರಡುತ್ತಿದ್ದು, ತಂಬಾಕು ಉತ್ಪನ್ನಗಳನ್ನ ಬಳಸುತ್ತಿರುವವರು ರೋಗ-ರುಜಿನೆಗಳಿಂದ ಬಳಲಿ ಆರ್ಥಿಕ ತೊಂದರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಆದ್ದರಿಂದ ಪ್ರತಿ ಒಬ್ಬ ನಾಗರಿಕರು ಇಂತಹ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವಶಿಕ್ಷಕರ  ಜವಾಬ್ದಾರಿ ಹೆಚ್ಚಿದೆ ಎಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಷಣ್ಮುಖಪ್ಪ. ಎಸ್ ಮಾತನಾಡಿ ಯುವಕರು ಕುತೂಹಲದಿಂದ ದುಶ್ಚಟಗಳಿಗೆ ಬಲಿಯಾಗಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವವರನ್ನ ರಸ್ತೆ ಬದಿಯಲ್ಲಿ ಅಂಟಿಸುವ ಪೊಸ್ಟರ್‍ಗಳಲ್ಲಿ ನೋಡುತ್ತಿದ್ದೇವೆ. ಹಾಗಾಗಿ ಉತ್ತಮ ಆರೋಗ್ಯಕ್ಕಾಗಿ ದುಶ್ಚಟಗಳಿಂದ ದೂರವಿರಿ, ತಂಬಾಕು ಬಾಯಿ ಮತ್ತು ಶ್ವಾಸಕೋಶದ ಕ್ಯಾನ್ಸರ್‍ಗೆ ಸಿಮೀತವಾಗದೆ, ದೇಹದ ಪ್ರತಿ ಒಂದು ಅಂಗಾಂಗಕ್ಕೂ ಕ್ಯಾನ್ಸರ್‍ನ್ನು ತರಿಸುತ್ತದೆ. ಆದ್ದರಿಂದ ಪ್ರಾರಂಭಿಕ ಹಂತದಿಂದಲೇ ದುಶ್ಚಟಗಳಿಂದ ದೂರವಿರಬೇಕೆಂದು ತಿಳಿಸಿದರು.ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಜಿಲ್ಲಾ ಕಾರ್ಯಕ್ರಮಾಧಿಕಾರಿ ಡಾ. ರಾಘವನ್ ಜಿ.ಡಿ, ಆರ್ಥಿಕಾಧಿಕಾರಿ ದ್ಯಾಮನಗೌಡ ಮುದ್ದನಗೌಡ್ರು, ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾದ ಡಾ. ದಿವಾಕರ್ ನಾಯ್ಕ, ಕ್ರೀಡಾ ವಿಭಾಗದ ದೈಹಿಕ ಶಿಕ್ಷಣದ ಮುಖ್ಯಸ್ಥರಾದ ಡಾ. ಕೆ ವೇಂಕಟೇಶ,  ಸಮಾಜಕಾರ್ಯ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರದೀಪ್ ಬಿ ಎಸ್, ಕ್ರೀಡಾಧಿಕಾರಿಗಳಾದ ಡಾ. ವೀರಪ್ಪ ಬಿ.ಹೆಚ್, ಸಿ ಜಿ ಆಸ್ಪತ್ರೆ ದಂತ ವಿಭಾಗದ ಮುಖ್ಯಸ್ಥರು ಸಂಪನ್ಮೂಲ ವ್ಯಕ್ತಗಳಾದ ಡಾ.ತಿಪ್ಪೇಸ್ವಾಮಿ ಪಿ. ಎಂ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ ಹಾಜರಿದ್ದರು