ಮಹಾಂತಪ್ಪ ಆಲೂರೆ ಕೊಲೆ ಪ್ರಕರಣ ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಕಲಬುರಗಿ:ಮಾ.01: ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದ ಮಹಾಂತಪ್ಪ ಆಲೂರೆಯವರು ದಿ. 29ನೇ ಫೇಬ್ರುವರಿ 2024ರಂದು ಬೆಳಿಗ್ಗೆ ಸಮಯದಲ್ಲಿ ಹೊಲದಿಂದ ಬರುವಾಗ ಅಪರಿಚಿತ ದುಷ್ಕರ್ಮಿಗಳಿಂದ ಭಯಾನಕವಾಗಿ ಕೊಲೆಯಾಗಿರುತ್ತಾರೆ. ಮಹಾಂತಪ್ಪ ಆಲೂರೆಯವರು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರಾಗಿದ್ದರು ಅಲ್ಲದೇ ಕಲಬುರಗಿ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಗ್ರಾಮಾಂತರ ಘಟಕದ ಮಾಜಿ ಉಪಾಧ್ಯಕ್ಷರಾಗಿದ್ದರು. ಇವರ ಕೊಲೆಯ ಹಿಂದೆ ಒಂದು ಷಡ್ಯಂತ್ರ ಇರುವುದು ಮೇಲ್ನೊಟಕ್ಕೆ ಕಂಡು ಬರುತ್ತದೆ ಪ್ರಕರಣವನ್ನು ಸಿಬಿಐ ತನಿಖೆಗೆ ಆಗ್ರಹಿಸಿ ಮಾ. 2 ರಂದು ಬೆಳಿಗ್ಗೆ 10:30 ಗಂಟೆಗೆ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಆಳಂದ ಮಂಡಲ ಬಿಜೆಪಿ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ ತಿಳಿಸಿದ್ದಾರೆ.
ಮಹಾಂತಪ್ಪ ಆಲೂರೆಯವರ ಕೊಲೆಯ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಅಲ್ಲದೇ ಮನೆಯ ಯಜಮಾನನನ್ನು ಕಳೆದುಕೊಂಡು ಅನಾಥವಾಗಿರುವ ಅವರ ಕುಟುಂಬದವರಿಗೆ 50 ಲಕ್ಷ ರೂ. ಪರಿಹಾರ ಧನ ನೀಡಬೇಕು ಎಂದು ಒತ್ತಾಯಿಸಿ ಭಾರತೀಯ ಜನತಾ ಪಕ್ಷ ಆಳಂದ ಮಂಡಲ ವತಿಯಿಂದ ಮಾ. 2 ರಂದು ಬೆಳಿಗ್ಗೆ 10:30 ಗಂಟೆಗೆ ಆಳಂದ ಪಟ್ಟಣದ ಬಸ್ ನಿಲ್ದಾಣದ ಎದುರು ಬೃಹತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರತಿಭಟನೆಯಲ್ಲಿ ತಾಲೂಕಿನ ಭಾರತೀಯ ಜನತಾ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕೌರ್ಯವನ್ನು ವಿರೋಧಿಸುವ ಸಮಸ್ತ ತಾಲೂಕಿನ ನಾಗರಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.