5.47 ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರು
ಕಲಬುರಗಿ,ಮಾ.1: ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಲಬುರಗಿ ಜಿಲ್ಲೆಯಲ್ಲಿ 3,70,405 ಮತ್ತು ಯಾದಗಿರಿ ಜಿಲ್ಲೆಯಲ್ಲಿ 1,77,403 ಕಾರ್ಮಿಕರು ಫಲಾನುಭವಿಗಳಾಗಿ ನೋಂದಣಿ ಮಾಡಿಕೊಂಡಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಹೇಳಿದ್ದಾರೆ.
ಸದನದಲ್ಲಿ ವಿಧಾನ ಪರಿಷತ್ತು ಸದಸ್ಯ ಬಿ.ಜಿ ಪಾಟೀಲ ಅವರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರಿಸಿದ್ದಾರೆ.
ಮಂಡಳಿಯ ನೋಂದಾಯಿತ ಫಲಾನುಭವಿಗಳಿಗೆ ಪಿಂಚಣಿ, ಕುಟುಂಬ ಪಿಂಚಣಿ,ದುರ್ಬಲತೆ ಪಿಂಚಣಿ,ವಸತಿ ಸೌಲಭ್ಯ,ಶೈಕ್ಷಣಿಕ ಸಹಾಯಧನ ಸೇರಿದಂತೆ ವಿವಿಧ ಕಲ್ಯಾಣ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ರೂಪಿಸಲಾಗಿದೆ ಎಂದು ಸಚಿವರು ವಿವರಿಸಿದರು.