ಪತ್ನಿಯನ್ನು ಕೊಂದ ಪತಿಗೆ ಜೀವಾವಧಿ ಶಿಕ್ಷೆ
ಕಲಬುರಗಿ,ಮಾ.1: ತವರು ಮನೆಯಿಂದ ಹಣ ತರುವಂತೆ ಪತ್ನಿಯನ್ನು ಪೀಡಿಸಿ ಕೊಲೆ ಮಾಡಿದ ಆರೋಪ ಸಾಬೀತಾದ್ದರಿಂದ ಅಪರಾಧಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಧರ್ಮಾಪುರ ತಾಂಡಾ ನಿವಾಸಿ ತಾರಾಸಿಂಗ್ ರಾಠೋಡ ಶಿಕ್ಷೆಗೆ ಒಳಗಾದ ವ್ಯಕ್ತಿ.
2022 ರ ಜನವರಿ 13 ರ ರಾತ್ರಿ ಪತ್ನಿಯೊಂದಿಗೆ ಜಗಳವಾಡಿ, ಆಕೆಯ ತಲೆಗೆ ಕ್ರಿಕೆಟ್ ಬ್ಯಾಟಿನಿಂದ ಹೊಡೆದು ತಾರಾಸಿಂಗ್ ಕೊಲೆ ಮಾಡಿದ್ದ.ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ನಂತರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.ವಾದ ವಿವಾದ ಆಲಿಸಿದ 3 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಚಂದ್ರಶೇಖರ ಕರೋಷಿ ಅವರು ತಾರಾಸಿಂಗಗೆ ಜೀವಾವಧಿ ಶಿಕ್ಷೆ ಮತ್ತು 35 ಸಾವಿರ ರೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಸರಕಾರದ ಪರವಾಗಿ 3 ನೇ ಹೆಚ್ಚುವರಿ ಸರಕಾರಿ ಅಭಿಯೋಜಕ ಗುರುಲಿಂಗಪ್ಪ ಶ್ರೀಮಂತ ತೇಲಿ ಅವರು ವಾದ ಮಂಡಿಸಿದ್ದರು